ಬ್ರೇಕಿಂಗ್ ನ್ಯೂಸ್
27-09-24 02:27 pm Mangalore Correspondent ಕ್ರೈಂ
ಪುತ್ತೂರು, ಸೆ.27: ಎರಡು ಕೋಟಿ ಸಾಲ ಪಡೆದು ಮರುಪಾವತಿ ಮಾಡದ್ದರಿಂದ ಬ್ಯಾಂಕ್ ಸಿಬಂದಿ ಮನೆಗೆ ತೆರಳಿದ್ದಕ್ಕೆ ತಿರುಮಲ ಹೋಂಡಾ ಶೋರೂಮ್ ಉದ್ಯಮಿಗಳಾದ ಅಪ್ಪ, ಮಗ ಸೇರಿ ಪಿಸ್ತೂಲ್ ತೋರಿಸಿ ಮನೆಯಲ್ಲಿ ಕೂಡಿ ಹಾಕಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಕೋರ್ಟ್ ರಸ್ತೆಯ ಎಸ್ ಬಿಐ ಶಾಖೆಯ ರಿಲೇಶನ್ ಶಿಪ್ ಮ್ಯಾನೇಜರ್ ಆಗಿರುವ, ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ (40) ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಲ್ನಾಡು ಗ್ರಾಮದ ಉಜಿರ್‌ಪಾದೆ ನಿವಾಸಿ ಶ್ರೀಮತಿ ಕೀರ್ತಿ ಅಖಿಲೇಶ್ ಎಂಬವರು ರೂ. 2 ಕೋಟಿ ಸಾಲ ಮಾಡಿದ್ದು, ಸದ್ರಿ ಸಾಲ ಮರುಪಾವತಿ ಮಾಡದೇ NPA ಆಗಿರುತ್ತದೆ. ಸಾಲ ಬಾಕಿಯ ಬಗ್ಗೆ ಹಲವಾರು ಬಾರಿ ವಕೀಲರ ಮುಖಾಂತರ ಲೀಗಲ್ ನೋಟೀಸ್ ಮಾಡಿದರೂ, ತಿಳಿಸಿ ಹೇಳಿದ್ದರೂ ಸಾಲ ಮರುಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳ ಸೂಚನೆಯಂತೆ ಸೆ.25ರಂದು ಮಧ್ಯಾಹ್ನ ಚೈತನ್ಯ ಮತ್ತು ಸಹೋದ್ಯೋಗಿಗಳಾದ ಆಕಾಶ್ ಚಂದ್ರಬಾಬು ಮತ್ತು ಶ್ರೀಮತಿ ದಿವ್ಯಶ್ರೀ ಅವರು ಬಲ್ನಾಡು ಗ್ರಾಮದ ಉಜಿರ್‌ಪಾದೆಯಲ್ಲಿರುವ ಕೀರ್ತಿ ಅಖಿಲೇಶ್ ಅವರ ಮನೆಗೆ ಹೋಗಿದ್ದರು.
ಮನೆಯಲ್ಲಿದ್ದ ಶ್ರೀಮತಿ ಅರುಣ್ ಕಿಶೋರ್ ಅವರು ಬ್ಯಾಂಕ್ ಸಿಬಂದಿಯನ್ನು ಮನೆ ಒಳಗೆ ಕರೆಸಿಕೊಂಡು ಅಖಿಲೇಶ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಅಖಿಲೇಶ್ ಅವರು ಮನೆಗೆ ಬಂದು ಬ್ಯಾಂಕ್ ಸಿಬಂದಿಯಲ್ಲಿ ಮನೆಗೆ ಬಂದ ಬಗ್ಗೆ ತಕರಾರು ತೆಗೆದು ಗದರಿಸಿರುವುದಲ್ಲದೆ, ತಂದೆ ಬರುವ ತನಕ ಇಲ್ಲಿಯೇ ಕೂರುವಂತೆ ಮನೆಯ ಬಾಗಿಲು ಹಾಕಿ ಬಲವಂತದಿಂದ ಕೂಡಿ ಹಾಕಿದ್ದಾರೆ. ಬಳಿಕ ಅಖಿಲೇಶ್ ತಂದೆ ಕೃಷ್ಣ ಕಿಶೋರ್ ಅವರು ಮನೆಗೆ ಬಂದಿದ್ದು ಬ್ಯಾಂಕ್ ಸಿಬಂದಿಗೆ ಗದರಿಸಿ ಪಿಸ್ತೂಲ್ ತೋರಿಸಿ ಶೂಟ್ ಮಾಡುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 132, 127(2), 351(2), r/w 3(5) ಬಿ.ಎನ್.ಎಸ್ ಮತ್ತು ಕಲಂ 27 ARMS Act ಅಡಿ ಪ್ರಕರಣ ದಾಖಲಾಗಿದೆ. ಕೃಷ್ಣ ಕಿಶೋರ್ ಕುಟುಂಬ ಸದಸ್ಯರು ಪುತ್ತೂರು, ಸುಳ್ಯ, ಬೆಳ್ಳಾರೆಯಲ್ಲಿ ತಿರುಮಲ ಹೆಸರಿನ ಶೋರೂಮ್ ಹೊಂದಿದ್ದಾರೆ. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಬೆಳಗ್ಗೆ ಬಲ್ನಾಡಿನ ಮನೆಗೆ ದಾಳಿ ನಡೆಸಿದ್ದು ತಂದೆ, ಮಗ ತಪ್ಪಿಸಿಕೊಂಡಿದ್ದಾರೆ.
Father and son display gun to bank officlas at puttur, police order probe, search for the missing. Police are now searching both the accused who are the owners of Honda showroom at puttur.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm