ಬ್ರೇಕಿಂಗ್ ನ್ಯೂಸ್
02-10-24 04:45 pm Mangalore Correspondent ಕ್ರೈಂ
ಮಂಗಳೂರು, ಅ.2: ನಿಷೇದಿತ ಡ್ರಗ್ಸ್ ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯನ್ನು ದಸ್ತಗಿರಿ ಮಾಡಿ 70 ಗ್ರಾಂ ಎಂಡಿಎಂಎ ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ನೆತ್ತಿಲಪದವು ಬಳಿ ಕಾರ್ಯಾಚರಣೆ ನಡೆಸಿದ್ದಾರೆ.
ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಉದ್ಯಾವರ ಕುಂಜತ್ತೂರು ನಿವಾಸಿ ಹಸನ್ ಆಶೀರ್(34), ಪಯ್ಯನೂರು ನಿವಾಸಿ ರಿಯಾಜ್ ಎ.ಕೆ(31), ಮಂಜೇಶ್ವರ ಕೆದಂಬಾಡಿ ನಿವಾಸಿ ಮೊಹಮ್ಮದ್ ನೌಷಾದ್(22), ಕುಂಜತ್ತೂರಿನ ಯಾಸೀನ್ ಇಮ್ರಾಜ್ @ ಇಂಬು(35) ಎಂಬವರನ್ನು ವಶಕ್ಕೆ ಪಡೆದು ಅವರಿಂದ ರೂ. 3,50,000/- ಮೌಲ್ಯದ 70 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್, ನಗದು ಹಣ ರೂ. 1460/- ಡಿಜಿಟಲ್ ತೂಕ ಮಾಪಕ ಸ್ವಾಧೀನಪಡಿಸಲಾಗಿದೆ. ಸೊತ್ತಿನ ಒಟ್ಟು ಮೌಲ್ಯ ರೂ. 4,25,500/- ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಬೆಂಗಳೂರಿನಿಂದ ಹಾಗೂ ಇತರ ಕಡೆಗಳಿಂದ ಎಂಡಿಎಂಎ ಖರೀದಿಸಿ ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ.
ಆರೋಪಿಗಳ ಪೈಕಿ ಹಸನ್ ಅಶಿರ್ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಯಾಸೀನ್ ಇಮ್ರಾಜ್ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಪೊಲೀಸ್ ಸ್ಟೇಷನ್ ನಲ್ಲಿ ಹಾಗೂ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಒಟ್ಟು ಎರಡು ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
In a major drug bust, Mangaluru CCB police arrested five individuals involved in the sale and transportation of the banned substance MDMA. The operation led to the seizure of 70 grams of MDMA.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm