ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್‌ಫೀಲ್ಡ್‌ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್‌ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm