ಬ್ರೇಕಿಂಗ್ ನ್ಯೂಸ್
27-10-24 01:13 pm Bengaluru Correspondent ಕ್ರೈಂ
ಬೆಂಗಳೂರು, ಅ 27: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಅಂತ ಗಂಡನನ್ನ ಪತ್ನಿಯೇ ಸುಪಾರಿ ಕೊಟ್ಟು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರಕರಣದ ಸಂಬಂಧ ನಾಗರತ್ನ (27) ಸೇರಿದಂತೆ ಐವರು ಆರೋಪಿಗಳು ಬಂಧನ ಮಾಡಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು 30 ವರ್ಷದ ತಿಪ್ಪೇಶ ಎಂದು ಗುರುತಿಸಲಾಗಿದೆ. ಅಕ್ಟೋಬರ್ 14 ರಂದು ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಭೋಗನಹಳ್ಳಿ ಕೆರೆ ಬಳಿ ತಿಪ್ಪೇಶನನ್ನು ದುಷ್ಕರ್ಮಿಗಳು ಆತನ ಮಾರ್ಮಂಗಕ್ಕೆ ಒದ್ದು, ಹಲ್ಲೆ ಮಾಡಿ ಕೊಲೆಗೈದಿದ್ದರಂತೆ. ಮೃತದೇಹ ಪತ್ತೆಯಾದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ್ದ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಘಟನೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಅವರು, ಮೃತ ತಿಪ್ಪೇಶನ ಹೆಂಡತಿಯೇ ಕೊಲೆ ಆರೋಪಿಯಾಗಿದ್ದಾಳೆ. ಕೆರೆಯ ನೀಲಗಿರಿ ತೋಪಿನ ಬಳಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣದಲ್ಲಿ 7 ಮಂದಿಯನ್ನು ಅರೆಸ್ಟ್ ಮಾಡಿದ್ದು, ಮುಂದಿನ ತನಿಖೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಆರೋಪಿ ನಾಗರತ್ನ ತನ್ನ ಸ್ವತಃ ಅಕ್ಕನ ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳಂತೆ. ಆದರೆ ಇದಕ್ಕೆ ಗಂಡನಿಗೆ ಆಕ್ಷೇಪ ವ್ಯಕ್ತಪಡಿಸಿ ಬುದ್ಧಿ ಮಾತು ಕೇಳಿ ಸಂಬಂಧ ಮುಂದುವರಿಸದಂತೆ ಎಚ್ಚರಿಕೆ ನೀಡಿದ್ದನಂತೆ. ಇದರಿಂದ ಅಸಮಾಧಾನಗೊಂಡ ಆಕೆ ಹೇಗಾದರೂ ಮಾಡಿ ಗಂಡನನ್ನ ತನ್ನ ದಾರಿಯಿಂದ ದೂರ ಮಾಡಿಕೊಳ್ಳಬೇಕು ಎಂದು ಪ್ರಿಕರನೊಂದಿಗೆ ಸೇರಿ ಸ್ಕೇಚ್ ರೂಪಿಸಿದ್ದಳಂತೆ.
ಗಂಡನಿಗೆ ಚಟ್ಟ ಕಟ್ಟಿ ನಾಟಕವಾಡಿದ್ದ ಐನಾತಿ ಮಹಿಳೆ ತನ್ನ ಗಂಡನನ್ನು ಯಾರೋ ಕೊಲೆ ಮಾಡಿದ್ದಾರೆ ಅಂತ ಸ್ವತಃ ದೂರು ನೀಡಿದ್ದಳಂತೆ. ಅಲ್ಲದೇ ಪತಿ ತಿಪ್ಪೇಶನನ್ನ ಶವದ ಮುಂದೆ ಕಣ್ಣೀರಿಟ್ಟು ನಾಟಕ ಮಾಡಿದ್ದಳಂತೆ. ತನಿಖೆ ವೇಳೆ ಅಕ್ಕನ ಗಂಡನ ಜೊತೆ ಸೇರಿ ಆರೋಪಿಯೇ ಪತಿಯ ಕೊಲೆಗೆ ಸುಪಾರಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಬೆಳ್ಳಂದೂರು ಪೊಲೀಸರು ಪತ್ನಿ ಸೇರಿ 7 ಮಂದಿ ಆರೋಪಿಗಳು ಅರೆಸ್ಟ್ ಮಾಡಿದ್ದಾರೆ.
ಇನ್ನು, ಮೃತ ತಿಪ್ಪೇಶ ಹಾಗೂ ಆರೋಪಿ ನಾಗರತ್ನ ಗಾರ್ಡನರ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಭೋಗನಹಳ್ಳಿ ಕೆರೆ ಬಳಿಯ ಲೇಬರ್ ಶೆಡ್ ನಲ್ಲಿ ವಾಸ ಮಾಡ್ತಿದ್ದ ನಾಗರತ್ನ ಭಾವ ರಾಮು ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಳಂತೆ. ಅಲ್ಲದೇ, ಗಂಡ ನನಗೆ ಕಿರಿ ಕಿರಿ ಕೊಡ್ತಿದ್ದಾನೆ. ಅವನನ್ನ ಕೊಲೆ ಮಾಡಿ, ನನ್ನನ್ನ ಕರೆದುಕೊಂಡು ಹೋಗು ಎಂದಿದ್ದಳಂತೆ. ಅದರಂತೆ ರಾಮು ಹಾಗೂ ಸ್ನೇಹಿತರು ಬಂದು ತಿಪ್ಪೇಶ ಕೊಲೆ ಮಾಡಿದ್ದು, ಕುತ್ತಿಗೆ ಹಾಗೂ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ್ದಾರೆ. ಕೊಲೆ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ನೀಲಗಿರಿ ತೋಪಿಗೆ ಓಡಿ ಬಂದಿದ್ದ ನಾಗರತ್ನ, ಗಂಡನ ಮೃತದೇಹದ ಬಳಿ ಕಣ್ಣೀರಿಟ್ಟು ನಾಟಕ ಮಾಡಿದ್ದಳಂತೆ. ಆ ಬಳಿಕ ಪೊಲೀಸ್ ಠಾಣೆಗೆ ಬಂದು ಏನು ಗೊತ್ತಿಲ್ಲದಂತೆ ದೂರು ನೀಡಿದ್ದಳಂತೆ.
ಪ್ರಕರಣ ದಾಖಲಿಸಿಕೊಂಡು ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಿಸಿದಾಗ ಕೃತ್ಯ ಬಯಲಿಗೆ ಬಂದಿದೆ. ನಾಗರತ್ನ ಅಕ್ಕನ ಗಂಡನ ಜೊತೆ ಸೇರಿ ಕೊಲೆ ಮಾಡಿರೋದು ಬೆಳಕಿಗೆ ಬಂದಿದ್ದು, ಆರೋಪಿಗಳ ಚಲನ ವಲನ ಸಿಸಿಟಿವಿ ಯಲ್ಲಿ ಗಮನಿಸಿ ಪ್ರಕರಣವನ್ನ ಭೇದಿಸಿದ್ದಾರೆ ಈ ಬಗ್ಗೆ ವೈಟ್ ಫೀಲ್ಡ್ ವಿಭಾಗ ಡಿಸಿಪಿ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.
Wife and boyfriend arrested for killing murder in bangalore with the help of supari killers. The police have arrested wife and five others in connection to this case
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm