ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್‌ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm