Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ ; ನೈಜೀರಿಯಾ ಪ್ರಜೆ ಸೇರಿ ಆರು ಮಂದಿ ಬಂಧನ 

28-10-24 11:12 pm       Mangalore Correspondent   ಕ್ರೈಂ

ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್‌ ಬಾಲಾಜಿ ಮತ್ತು ಮುಖೇಶ್‌ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್‌ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್‌ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.

The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.