ಬ್ರೇಕಿಂಗ್ ನ್ಯೂಸ್
30-10-24 10:43 pm HK News Desk ಕ್ರೈಂ
ಹುಬ್ಬಳ್ಳಿ , ಅ.30: ಹೈದರಾಬಾದ್‌ನಲ್ಲಿ ಟೆಕ್ಕಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ 30 ಗಂಟೆ ಲಾಡ್ಜ್ನಲ್ಲಿ ಡಿಜಿಟಲ್ ಅರೆಸ್ಟ್ ಆಗಿದ್ದ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಇಂತಹದ್ದೇ ಪ್ರಕರಣವೊಂದು ವಾಣಿಜ್ಯ ನಗರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರಿಗೆ ವಂಚಕರು, ನಿಮ್ಮ ಹೆಸರಲ್ಲಿ ಪಾರ್ಸಲ್ ಮುಂಬೈನಿಂದ ತೈವಾನ್‌ಗೆ ರವಾನೆ ಆಗುತ್ತಿದೆ. ಅದರಲ್ಲಿ ಕಾನೂನುಬಾಹಿರ ವಸ್ತುಗಳಿವೆ. ಸೈಬರ್ ಕ್ರೈಂ ಬ್ರ್ಯಾಂಚ್‌ನವರು ಮಾತನಾಡುತ್ತಾರೆಂದು ಹೇಳಿ ಕರೆ ವರ್ಗಾಯಿಸಿದ್ದಾರೆ. ನಂತರ ವಿಡಿಯೋ ಕರೆ ಮೂಲಕ ಮಾತನಾಡಿ, ನಿಮ್ಮ ಹೆಸರಿನ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ 24 ಖಾತೆಗಳು ಆರೋಪಿತನೊಂದಿಗೆ ಲಿಂಕ್ ಇವೆ.
ನಿಮ್ಮನ್ನು ಡಿಜಿಟಲ್ ಆಗಿ ಬಂಧಿಸಬೇಕಾಗಿದ್ದು, ನಿಮ್ಮ ಬ್ಯಾಂಕ್ ಖಾತೆಗಳ ಪರಿಶೀಲನೆ ಇದೆ ಎಂದು ಹೆದರಿಸಿ ಅ.21ರಂದು ಬೆಳಗ್ಗೆಯಿಂದ 22ರ ಸಂಜೆವರೆಗೆ ಮನೆಯಲ್ಲಿ ಡಿಜಿಟಲ್ ಅರೆಸ್ಟ್ ಮಾಡುವ ಮೂಲಕ ಒಂದು ದಿನ ತಮ್ಮ ವಶದಲ್ಲಿಟ್ಟುಕೊಂಡಿದ್ದರು. ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ಮೂಲಕ ಒಟ್ಟು 81,06,286 ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಇದಕ್ಕೂ ಮೊದಲು ವಂಚಕರು ಟೆಕ್ಕಿಗೆ ವಿಡಿಯೋ ಕಾಲ್ ಮಾಡಿದ್ದಾಗ ಮನೆಯಲ್ಲಿನ ಯಾರೊಂದಿಗೂ ಸಂಪರ್ಕ ಹೊಂದಬಾರದು. ರೂಮ್ ಬಿಟ್ಟು ಎಲ್ಲೂ ಹೋಗಬಾರದು. ಹೊರಗಿನಿಂದ ಒಳಗೆ ಯಾರು ಬರದಂತೆ ಭದ್ರಪಡಿಸಿಕೊಳ್ಳಬೇಕು. ಇಲ್ಲವಾದರೆ ನಾವು ಬಂಧಿಸುತ್ತೇವೆಂದು ರೂಮ್‌ನಲ್ಲೇ ನಿರ್ಬಂಧಿಸಿದ್ದರು.
ವಂಚನೆ ಹೇಗೆ?:
ಪಾರ್ಸೆಲ್, ಕೊರಿಯರ್ ಕಂಪನಿಗಳ ಸೋಗಿನಲ್ಲಿ ಕರೆಯೊಂದು ಬರಲಿದೆ. ನಿಮ್ಮ ಹೆಸರಲ್ಲಿ ಯಾರೋ ಪಾರ್ಸೆಲ್ ಕಳುಹಿಸಿದ್ದಾರೆ ಅಥವಾ ನಿಮ್ಮ ಹೆಸರಿನಿಂದ ಥಾಯ್ಲೆಂಡ್, ತೈವಾನ್, ಮಲೇಷಿಯಾಗೆ ಪಾರ್ಸಲ್ ಕಳುಹಿಸಲಾಗಿದೆ. ಅದರಲ್ಲಿ ಮಾದಕ ವಸ್ತು, ಮೊಬೈಲ್ ಫೋನ್, ಲ್ಯಾಪ್‌ಟಾಪ್ ಇನ್ನಿತರ ವಸ್ತುಗಳಿವೆ. ಡ್ರಗ್ಸ್ ಜಾಲ ನಿಮ್ಮ ಹೆಸರಿನಲ್ಲಿ ಈ ಕೃತ್ಯವೆಸಗಿದೆ. ಈ ಕುರಿತು ನೀವು ದೂರು ದಾಖಲಿಸಿ ಅಥವಾ ನಿಮಗೆ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ಕರೆ ಮಾಡುತ್ತಾರೆಂಬ ಸಂದೇಶ ನೀಡುತ್ತಾರೆ. ನಂತರ ಸೈಬರ್ ಕ್ರೈಂ ಪೊಲೀಸರು, ಸಿಐಡಿ, ಸಿಸಿಬಿ ಸೇರಿದಂತೆ ಇತರೆ ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕರೆ ಮೂಲಕ ವಿಚಾರಣೆ ನಡೆಸುತ್ತಾರೆ.
ಆಧಾರ್‌ನಲ್ಲಿರುವ ಅಥವಾ ಸರ್ಕಾರಿ ದಾಖಲೆಯಲ್ಲಿರುವ ಗುರುತು ಪತ್ತೆಗೆ ವಿವಸ್ತ್ರಗೊಳಿಸುತ್ತಾರೆ. ಈ ಪ್ರಕರಣದಿಂದ ಪಾರಾಗಲು, ಬಂಧನವಾಗದಂತಿರಲು ಇಂತಿಷ್ಟು ಹಣ ನೀಡಬೇಕೆಂದು ಹೇಳುತ್ತಾರೆ. ಈ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುವ ಅನಿವಾರ್ಯ ಪರಿಸ್ಥಿತಿ ಎದುರಾಗುವಂತೆ ಮಾಡುತ್ತಾರೆ.
Hubli software engineer loses 80 lacs for cyber fraud digital arrest. Software engineer was locked in the lodge for 30 hours in the name of digital arrest and was threatened to transfer rupees 80 lakhs.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm