ಬ್ರೇಕಿಂಗ್ ನ್ಯೂಸ್
04-11-24 10:30 pm Mangalore Correspondent ಕ್ರೈಂ
ಉಳ್ಳಾಲ, ನ.4: ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕಾಗಿ ವ್ಯಕ್ತಿಯೋರ್ವರಿಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈದು ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಸೋಮೇಶ್ವರ ಪುರಸಭೆ ಕಚೇರಿಯ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಂ. ಉಚ್ಚಿಲ(53) ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಯಾನೆ ಜುಟ್ಟು ಪೂಜಾರಿ ಎಂಬಾತ ಹಲ್ಲೆಗೈದಿರೋದಾಗಿ ಆರೋಪಿಸಲಾಗಿದೆ. ಕಿಶೋರ್ ಅವರು ಸೋಮವಾರ ಬೆಳಗ್ಗೆ ತನ್ನ ಮಿತ್ರ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲಲ್ಲಿ ಚಹಾ ಕುಡಿದು ಸ್ಕೂಟರಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಸಮೀಪದಲ್ಲಿ ಆರೋಪಿ ಸುನಿಲ್ ಪೂಜಾರಿ ತಡೆದಿದ್ದು ಕಿಶೋರ್ ಅವರನ್ನ ಉದ್ದೇಶಿಸಿ ಮರಳುಗಾರಿಕೆಯ ಬಗ್ಗೆ ಭಾರೀ ಪೊಲೀಸರಿಗೆ ಮಾಹಿತಿ ನೀಡುತ್ತೀಯ, ಈ ಹಿಂದೆಯೇ ನಿನಗೆ ಗತಿ ಕಾಣಿಸಲು ಪ್ರಯತ್ನಿಸಿದ್ದೆ, ಇನ್ನು ಮೂರು ತಿಂಗಳೊಳಗೆ ನೀನೊಬ್ಬನೆ ಸಿಕ್ಕಿದರೆ ಕೊಂದು ಬಿಡುತ್ತೇನೆಂದು ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದು, ಬಳಿಕ ಸೊಂಟದಿಂದ ಚಾಕು ಹೊರ ತೆಗೆದು ಇರಿಯಲು ಮುಂದಾಗಿದ್ದಾನೆ. ಈ ವೇಳೆ ಸ್ನೇಹಿತ ಪುಷ್ಪರಾಜ್ ಅವರು ಸ್ಕೂಟರನ್ನ ವೇಗವಾಗಿ ಚಲಾಯಿಸಿದರ ಪರಿಣಾಮ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆಂದು ಹಲ್ಲೆಗೊಳಗಾದ ಕಿಶೋರ್ ಆರೋಪಿಸಿದ್ದಾರೆ.
ಉಚ್ಚಿಲ ಬಟ್ಟಂಪಾಡಿ ಪ್ರದೇಶದಲ್ಲಿ ತಿಂಗಳುಗಳ ಹಿಂದಷ್ಟೆ ಸಿಸಿಬಿ ಪೊಲೀಸರು ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮರಳನ್ನ ವಶಪಡಿಸಿದ್ದರು. ಆ ಪ್ರಕರಣದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಸುನಿಲ್ ಪೂಜಾರಿ ಯಾನೆ ಜುಟ್ಟು ಪೂಜಾರಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಹಲ್ಲೆಗೊಳಗಾದ ಕಿಶೋರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore 53 year old man attacked with rod at someshwara in Ullal. Kishor has been admitted to hospital. Sunil Poojary who was angry over Kishor for informing police over his illegal sand mining attacked Kishor with rod. Ullal police are investigating the case
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm