ಬ್ರೇಕಿಂಗ್ ನ್ಯೂಸ್
11-11-24 12:16 pm Udupi Correspondent ಕ್ರೈಂ
ಉಡುಪಿ, ನ.11: ಮನೆಯೊಂದಕ್ಕೆ ನುಗ್ಗಿ ಮಹಿಳೆಯನ್ನು ಚುಡಾಯಿಸಿ ದಾಂಧಲೆ ಸೃಷ್ಟಿಸಿದ ಆರೋಪದಲ್ಲಿ ವಿಚಾರಣೆಗೆ ಬ್ರಹ್ಮಾವರ ಠಾಣೆಗೆ ಕರೆತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಠಾಣೆಯಲ್ಲಿ ಲಾಕಪ್ ನಲ್ಲಿರುವಾಗಲೇ ಮೃತಪಟ್ಟಿದ್ದು, ಪೊಲೀಸರ ಹಲ್ಲೆಯಿಂದಾಗಿ ಸಾವು ಆಗಿದೆಯೇ ಎನ್ನುವ ಅನುಮಾನ ಮೂಡಿಸಿದೆ.
ಕೇರಳದ ಕೊಲ್ಲಂ ಜಿಲ್ಲೆಯ ನಿವಾಸಿ ಬಿಜು ಮೋಹನ್ (45) ಮೃತ ವ್ಯಕ್ತಿ. ಸದ್ಯ ಇದೊಂದು ಲಾಕಪ್ ಡೆತ್ ಎಂದಿರುವ ಉಡುಪಿ ಎಸ್ಪಿ ಡಾ.ಕಎ. ಅರುಣ್, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು ಘಟನೆ ಬಗ್ಗೆ ಸಿಐಡಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕೊಲ್ಲಂ ಮೂಲದ ಬಿಜು ಮೋಹನ್ ಶನಿವಾರ ರಾತ್ರಿ ಮದ್ಯಪಾನ ಮಾಡಿ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟಿನ ಮನೆಯೊಂದಕ್ಕೆ ನುಗ್ಗಿ ಮಹಿಳೆ ಹಾಗೂ ಮಕ್ಕಳನ್ನು ಚುಡಾಯಿಸಿದ್ದ ಎಂದು ದೂರಲಾಗಿತ್ತು. ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಮಹಿಳೆಯ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮದ್ಯ ಸೇವಿಸಿದ್ದ ಬಿಜುವನ್ನು ಠಾಣೆಯೊಳಗೆ ಸೆಲ್ ನಲ್ಲಿ ಇರಿಸಲಾಗಿತ್ತು. ಭಾನುವಾರ ಮುಂಜಾನೆ ಠಾಣೆಯ ಸೆಲ್ ನಲ್ಲಿ ಗೋಡೆಗೆ ಒರಗಿ ಪ್ರಜ್ಞೆ ಕಳಕೊಂಡ ಸ್ಥಿತಿಯಲ್ಲಿದ್ದುದರಿಂದ ಪೊಲೀಸರು ಬ್ರಹ್ಮಾವರ ಸಮುದಾಯ ಆಸ್ಪತ್ರೆಗೆ ಒಯ್ದಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಆರೋಪಿ ಮೃತಪಟ್ಟಿರುವುದಾಗಿ ತಿಳಿಸಿದ್ದರು. ವಿಷಯ ತಿಳಿದ ಕೂಡಲೇ ಬ್ರಹ್ಮಾವರ ಪೊಲೀಸ್ ಠಾಣೆಗೆ ಆಗಮಿಸಿದ್ದ ಎಸ್ಪಿ ಡಾ.ಅರುಣ್ ಕುಮಾರ್, ಘಟನೆಗೆ ಸಂಬಂಧಿಸಿ ಹೇಳಿಕೆ ನೀಡಿ ಲಾಕಪ್ ಡೆತ್ ಆಗಿರುವುದರಿಂದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗುವುದು. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಮೃತ ಬಿಜು ಮೋಹನ್ ಪಾನಮತ್ತನಾಗಿ ಕುಂಜಾಲು ಎಂಬಲ್ಲಿಯೂ ಶನಿವಾರ ಸಂಜೆ ಮನೆಯೊಂದಕ್ಕೆ ಆಗಮಿಸಿದ್ದು, ಮನೆಯ ಮಾಲೀಕರು ಇಲ್ಲಿಂದ ಹೋಗುವಂತೆ ಕಳಿಸಿದ್ದರಿಂದ ಸೂರೆಬೆಟ್ಟಿನ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಬಿಜು ಮೋಹನ್ ಕೇವಲ ಕಾರ್ಮಿಕನಾಗಿಯೇ ಬಂದಿದ್ದನೇ ಅಥವಾ ಆತನ ಸಂಬಂಧಿಕರ ಮನೆ ಈ ಪರಿಸರದಲ್ಲಿ ಇದೆಯೇ ಎನ್ನುವುದು ಗೊತ್ತಾಗಿಲ್ಲ. ಮಹಿಳೆ ಹಾಗೂ ಮಕ್ಕಳಿದ್ದ ಮನೆಗೆ ನುಗ್ಗಿದ್ದರಿಂದ ಆತನಿಗೆ ಸ್ಥಳೀಯರು ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಹಲ್ಲೆಯಿಂದಾಗಿ ಸಾವನ್ನಪ್ಪಿದನೇ ಅಥವಾ ಹೃದಯಾಘಾತ ಆಗಿದೆಯೇ, ಪೊಲೀಸರು ವಿಚಾರಣೆ ಸಂದರ್ಭದಲ್ಲಿ ಏಟು ಕೊಟ್ಟಿದ್ದಾರೆಯೇ ಇತ್ಯಾದಿ ಪ್ರಶ್ನೆಗಳ ಬಗ್ಗೆ ಮರಣೋತ್ತರ ಪರೀಕ್ಷೆಯಲ್ಲಿ ಉತ್ತರ ಸಿಗಬೇಕಿದೆ.
ಸದ್ಯಕ್ಕೆ ಮನೆಯವರಿಗೆ ಮಾಹಿತಿ ನೀಡಿದ್ದು, ಕುಟುಂಬಸ್ಥರು ನೀಡುವ ದೂರನ್ನು ಆಧರಿಸಿ ಮುಂದಿನ ತನಿಖೆ ನಡೆಸಲಾಗುವುದು. ಮರಣೋತ್ತರ ಪರೀಕ್ಷೆಯನ್ನು ಎರಡು ತಂಡಗಳು ನಡೆಸಲಿದ್ದು, ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಲಿದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
The Udupi district police will hand over a case involving the death of a man in the Brahmavara police custody on Sunday to the Criminal Investigation Department (CID) as per the laid down procedure. One Biju Mohan, 45, a native of Kollam, was taken into police custody on Saturday evening after a woman from Cherkadi village complained of sexual harassment. The accused Biju Mohan however was found in an injured condition on early Sunday morning and was declared brought dead at the Brahmavara government hospital.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am