ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 08:24 pm
HK News Staffer
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm