ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್‌ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.

ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್‌ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm