ಬ್ರೇಕಿಂಗ್ ನ್ಯೂಸ್
22-11-24 10:47 pm Mangalore Correspondent ಕ್ರೈಂ
ಮಂಗಳೂರು, ನ.22: ಅಮೆರಿಕದಲ್ಲಿ ಐಟಿ ಕೆಲಸ ಮಾಡಿದ್ದ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಬಲೆಗೆ ಬೀಳಿಸಿಕೊಂಡ ಸೈಬರ್ ವಂಚಕರು ಬರೋಬ್ಬರಿ 1.70 ಕೋಟಿ ವಸೂಲಿ ಮಾಡಿದ್ದಾರೆ.
ಕಂಪ್ಯೂಟರ್ ತಂತ್ರಜ್ಞಾನ, ಸೈಬರ್ ವಂಚನೆ ಬಗ್ಗೆ ಮಾಹಿತಿ ಇದ್ದ ವ್ಯಕ್ತಿಯನ್ನೇ ಸೈಬರ್ ವಂಚಕರ ಯಾಮಾರಿಸಿ ಕೋಟಿ ಪೀಕಿಸಿದ್ದಾರೆ. ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇವರು ಮೂಲತಃ ಮುಂಬೈಯವರಾಗಿದ್ದು, ಈ ಮೊದಲು ಅಮೆರಿಕದಲ್ಲಿ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ವಾಪಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಖರೀದಿಸಿ ವಾಸವಾಗಿದ್ದರು.
ನ. 11ರಂದು ದೂರುದಾರರು ಮನೆಯಲ್ಲಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದ. ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದ್ದು, ಮುಂಬಯಿನ ಅಂಧೇರಿ (ಪೂ)ದಲ್ಲಿ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ಆಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದ.
‘ನಂತರ ಇನ್ನೊಬ್ಬ ಕರೆ ಮಾಡಿ, ಪ್ರದೀಪ್ ಸಾವಂತ್ ಎಂದು ಪರಿಚಯಿಸಿಕೊಂಡು ಮಾತನಾಡಿದ್ದ. ನರೇಶ್ ಗೋಯೆಲ್ ವಂಚನೆ ಪ್ರಕರಣ ಹಾಗೂ ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದು, ಈ ಬಗ್ಗೆ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಅಂಧೇರಿಯ ಕೆನರಾ ಬ್ಯಾಂಕಿನ ಶಾಖೆಯಲ್ಲಿ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಮಾಡಲಾಗಿದೆ. ಇದಕ್ಕೆ ನನ್ನ ಗುರುತಿನ ಚೀಟಿ ಬಳಸಿ ಸಿಮ್ ಖರೀದಿಸಲಾಗಿದೆ. ಪ್ರಕರಣದಲ್ಲಿ ನಿಮ್ಮನ್ನು ಬಂಧಿಸಲಿದ್ದೇವೆ ಎಂದು ಆತ ತಿಳಿಸಿದ್ದ. ಬಳಿಕ ಮೊಬೈಲ್‌ಗೆ ವಾಟ್ಸ್ ಆ್ಯಪ್‌ನಲ್ಲಿ ವಿಡಿಯೊ ಕರೆ ಬಂದಿತ್ತು. ಅದರಲ್ಲಿ ಕಾಣಿಸಿಕೊಂಡ ಇಬ್ಬರು ತಮ್ಮನ್ನು ಪೊಲೀಸ್ ಅಧಿಕಾರಿ ರಾಹುಲ್ ಕುಮಾರ್ ಹಾಗೂ ಸಿಬಿಐ ಮಹಿಳಾ ಅಧಿಕಾರಿ ಆಕಾಂಕ್ಷಾ ಎಂದು ಪರಿಚಯಿಸಿಕೊಂಡಿದ್ದರು.
ನನ್ನ ವಿರುದ್ಧ ಸಿಬಿಐ ಕಚೇರಿಯಲ್ಲಿ ಪ್ರಕರಣ ದಾಖಲಿಸಿದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ವಾಟ್ಸ್ ಆ್ಯಪ್‌ಗೆ ಕಳುಹಿಸಿದ್ದರು. ಬಳಿಕ ಪ್ರಕರಣದಿಂದ ಮುಕ್ತಗೊಳಿಸುವುದಾಗಿ ಹೇಳಿ ಹಣದ ಬೇಡಿಕೆ ಇಟ್ಟಿದ್ದರು. ಇದರಿಂದ ಭಯಗೊಂಡು ಆರ್‌ಟಿಜಿಎಸ್ ಮೂಲಕ ಹಾಗೂ ಆನ್‌ಲೈನ್ ಮೂಲಕ ಹಂತ ಹಂತವಾಗಿ ₹ 53 ಲಕ್ಷ, ₹ 74 ಲಕ್ಷ, ₹ 44 ಲಕ್ಷ ಸೇರಿ ಒಟ್ಟು ₹1.71 ಕೋಟಿ ಹಣವನ್ನು ಅವರು ಸೂಚಿಸಿದ ಬೇರೆ ಬೇರೆ ಖಾತೆಗಳಿಗೆ ನ.13ರಿಂದ ನ. 19ರ ನಡುವೆ ವರ್ಗಾಯಿಸಿದ್ದೇನೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
A man in the city was scammed of Rs 1.7 crore by fraudsters posing as officials from the Telecom Regulatory Authority of India (TRAI) and the Central Bureau of Investigation (CBI). The elaborate scheme spanned several days and involved fake threats, fabricated documents, and phone calls from multiple impersonators.
04-04-25 12:00 pm
Bangalore Correspondent
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
04-04-25 08:50 pm
HK News Desk
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
04-04-25 01:39 pm
Mangalore Correspondent
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm