ಬ್ರೇಕಿಂಗ್ ನ್ಯೂಸ್
25-11-24 06:17 pm HK News Desk ಕ್ರೈಂ
ಹುಬ್ಬಳ್ಳಿ, ನ.25: ಮಂಗಳೂರು ಮೂಲದ ಇಬ್ಬರು ದರೋಡೆಕೋರರು ಪೊಲೀಸರಿಗೆ ಹಲ್ಲೆ ನಡೆಸಲೆತ್ನಿಸಿ ಪರಾರಿಯಾಗಲು ನೋಡಿದ್ದು, ಹುಬ್ಬಳ್ಳಿ ಸಿಸಿಬಿ ಪೊಲೀಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಇಲ್ಲಿಯ ಹಳೇಗಬ್ಬೂರ ಬಳಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಮಂಗಳೂರಿನ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಫಾರೂಕ್ ಸಿ.ಕೆ ಬಾವ ಹಾಗೂ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಭರತ್ ಕುಮಾರ್ ಶೆಟ್ಟಿ ಎಂಬವರನ್ನು ಬಂಧಿಸಿ ಸ್ಥಳ ಮಹಜರಿಗೆ ಒಯ್ದಿದ್ದ ವೇಳೆ ಸಿಸಿಬಿ ಪಿಐ ಮಾರುತಿ ಗುಳ್ಳಾರಿ ಹಾಗೂ ಧಾರವಾಡ ಶಹರ ಠಾಣೆ ಪಿಎಸ್ಐ ಸ್ವಾತಿ ಮುರಾರಿ ಗುಂಡು ಹಾರಿಸಿದ್ದಾರೆ.

ಆರೋಪಿಗಳ ಹಲ್ಲೆಯಿಂದ ಗಾಯಗೊಂಡ ಪಿಎಸ್ಐ ಸ್ವಾತಿ ಮುರಾರಿ, ಸಿಸಿಬಿಯ ಮಹಾಂತೇಶ ಮಾದರ, ಶ್ರೀಕಾಂತ ತಲ್ಲೂರ ಹಾಗೂ ಗಾಯಗೊಂಡ ಆರೋಪಿಗಳನ್ನು ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನ.8ರಂದು ನಸುಕಿನಲ್ಲಿ 3.30ರ ವೇಳೆಗೆ ಹುಬ್ಬಳ್ಳಿ ರೈಲು ನಿಲ್ದಾಣ ಬಳಿಯಲ್ಲಿ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಎಂಬವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ 10-12 ಜನರಿದ್ದ ತಂಡ ಅಡ್ಡಗಟ್ಟಿ 6.50 ಲಕ್ಷ ರೂ. ನಗದು, ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆಗೈದು ಪರಾರಿಯಾಗಿತ್ತು. ಈ ಕುರಿತು ಹುಬ್ಬಳ್ಳಿ ಶಹರ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪ್ರಕರಣ ತನಿಖೆಗಾಗಿ ಸಿಸಿಬಿ ಪೊಲೀಸರ ತಂಡವನ್ನು ನಿಯೋಜನೆ ಮಾಡಲಾಗಿತ್ತು. ಆರೋಪಿಗಳನ್ನು ಮಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದು, ದರೋಡೆ ಘಟನೆ ನಡೆದ ಹಳೇಗಬ್ಬೂರು ಎನ್ನುವ ಸ್ಥಳಕ್ಕೆ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ನೋಡಿದ್ದಕ್ಕೆ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಸಿಬಂದಿಗೂ ಗಾಯವಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳಿಬ್ಬರ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಹಲವಾರು ಕೇಸುಗಳಿವೆ. ಫಾರೂಕ್ ಮೇಲೆ 17ಕ್ಕೂ ಹೆಚ್ಚು ಕೇಸುಗಳಿವೆ ಎಂದವರು ತಿಳಿಸಿದ್ದಾರೆ. ದರೋಡೆ ತಂಡದಲ್ಲಿ ಮಂಗಳೂರು, ಕೇರಳದ ಕಾಸರಗೋಡು ಜಿಲ್ಲೆಯವರು ಇದ್ದಾರೆ ಎಂಬ ಮಾಹಿತಿಯಿದ್ದು ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಈ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Two suspected robbers were shot at on Sunday when they tried to escape from police as they were taken for a spot inspection, Hubballi-Dharwad Police Commissioner N Shashikumar said. The two alleged robbers Bharath and Farooq from Mangaluru were shot in their leg when they assaulted three police officers including two women police officers, Shashikumar.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm