ಬ್ರೇಕಿಂಗ್ ನ್ಯೂಸ್
06-12-24 09:27 pm Mangalore Correspondent ಕ್ರೈಂ
ಮಂಗಳೂರು, ಡಿ.6: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ದಸ್ತಗಿರಿ ಮಾಡಿ, ಅವರಿಂದ 200 ಗ್ರಾಂ ಎಂಡಿಎಂಎಯನ್ನು ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜ್ಪೆ ಪೊಲೀಸರು ದಸ್ತಗಿರಿ ಮಾಡಿದ್ದು, ಆರೋಪಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದರು.
ಬೆಂಗಳೂರು ಪುನೀತ್ ಲೇಔಟ್, ಅಂದ್ರಹಳ್ಳಿ, ವಿಶ್ವನೀಡಂ ಪೋಸ್ಟ್ ನಿವಾಸಿ ದರ್ಶನ್ ಕೆ.ಜಿ(25) ಹಾಗೂ ಮೂಲತಃ ನೈಜೀರಿಯಾ ನಿವಾಸಿ, ಬೆಂಗಳೂರಿನ ಬೆಟ್ಟ ಹಲಸೂರಿನಲ್ಲಿ ನೆಲೆಸಿದ್ದ ಚಿಕ ಜೋಸೇಫ್ ಇಝಿ ಎಂಬವರನ್ನು ವಶಕ್ಕೆ ಪಡೆದು ಅವರ ವಶದಿಂದ ರೂ. 10,00,000/- ಮೌಲ್ಯದ 200 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮಾರುತಿ ಬಲೆನೋ ಕಾರು, 5 ಮೊಬೈಲ್ ಫೋನ್ ಗಳು, ವಿವಿಧ ಬ್ಯಾಂಕ್ ಗಳ 5 ಡೆಬಿಟ್ ಕಾರ್ಡ್ ಗಳು, 7 ಸಿಮ್ ಕಾರ್ಡ್ ಗಳು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಲಾಗಿದೆ.
ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ. 18,25,500/- ಆಗಬಹುದು. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಆರೋಪಿಗಳು ಬೆಂಗಳೂರಿನಲ್ಲಿದ್ದುಕೊಂಡು ಇನ್ನೋರ್ವ ಆರೋಪಿ ದರ್ಶನ್ ಎಂಬಾತನ ಜೊತೆ ಸೇರಿ ಮಂಗಳೂರಿನ ವಿವಿಧ ವ್ಯಕ್ತಿಗಳಿಗೆ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಎಂಡಿಎಂಎ ಅನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಆರೋಪಿ ಚಿಕ ಜೋಸೆಫ್ ಇಝಿ ಎಂಬಾತನು 2023 ನೇ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದ. ಬೆಂಗಳೂರಿನಲ್ಲಿ ಯಲಹಂಕದಲ್ಲಿ ನೈಜೀರಿಯ ಪ್ರಜೆಯ ಹೇರ್ ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದು, ಈತನ ವಿರುದ್ಧ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ.ವಿ, ಎಎಸ್ಐ ರಾಮ ಪೂಜಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The Mangaluru CCB police successfully apprehended two drug peddlers, including a Nigerian national, involved in the transportation and sale of MDMA from Bengaluru to Mangaluru. They seized 200 grams of MDMA, a banned narcotic substance.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm