ಬ್ರೇಕಿಂಗ್ ನ್ಯೂಸ್
18-12-24 11:15 am Mangalore Correspondent ಕ್ರೈಂ
ಮಂಗಳೂರು, ಡಿ.18: ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆಹಚ್ಚಿ 30 ಗ್ರಾಂ ಕೋಕೆನ್ ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
2024ರ ಮಾರ್ಚ್ ತಿಂಗಳಲ್ಲಿ ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇಧಿತ ಕೋಕೆನ್ ಅನ್ನು ಖರೀದಿಸಿ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು @ ಶಾನ್ ನವಾಜ್, ಮಹಮ್ಮದ್ ಅಶ್ಫಕ್ @ ಅಶ್ಫಾ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಅವರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಗೋವಾ ರಾಜ್ಯದ ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿ ನೆಲೆಸಿದ್ದ ನೈಜೇರಿಯಾ ದೇಶದ ಪ್ರಜೆ ಮೈಕಲ್ ಒಕಫಾರ್ ಒಡಿಕ್ಪೋ (44) ಎಂಬಾತನನ್ನು ವಶಕ್ಕೆ ಪಡೆದು ಆತನ ವಶದಿಂದ 30 ಗ್ರಾಂ ಕೋಕೇನ್, ಸಾಗಾಟಕ್ಕೆ ಉಪಯೋಗಿಸಿದ ಬೊಲೆನೋ ಕಾರು, ಮೊಬೈಲ್ ಫೋನ್ ಗಳು-2, ನಗದು ಹಣ ರೂ. 4500/- ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 11,25,000/- ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿ ನೈಜೇರಿಯಾ ದೇಶದವನಾಗಿದ್ದು, 2012ರಲ್ಲಿ ಭಾರತಕ್ಕೆ ವ್ಯಾಪಾರದ ವೀಸಾದಲ್ಲಿ ಬಂದು ಮುಂಬೈಯಲ್ಲಿ ಸುಮಾರು ಒಂದೂವರೆ ವರ್ಷ ವಾಸ್ತವ್ಯವಿದ್ದು ನಂತರ ಗೋವಾಕ್ಕೆ ಬಂದು ಗೋವಾದಲ್ಲಿ ವಾಸ್ತವ್ಯವಿದ್ದು ಮಾದಕ ವಸ್ತು ಮಾರಾಟ ಮಾಡುತ್ತಿರುವುದಾಗಿದೆ. ಈತನ ವಿರುದ್ದ ಈಗಾಗಲೇ ಗೋವಾದಲ್ಲಿ ಒಟ್ಟು 3 ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The Mangaluru City Crime Branch (CCB) police have successfully arrested a Nigerian national who was supplying banned narcotic substances, particularly cocaine, to Mangaluru. The accused, Michael Okafar Odikpo ,who resides in Goa, was apprehended with 30 grams of cocaine.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm