ಬ್ರೇಕಿಂಗ್ ನ್ಯೂಸ್
21-12-24 06:24 pm Mangalore Correspondent ಕ್ರೈಂ
ಮಂಗಳೂರು, ಡಿ.21: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ದುಪ್ಪಟ್ಟು ಲಾಭ ಸಿಗುತ್ತೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಕಲಿ ಏಪ್ ನಲ್ಲಿ ಹೂಡಿಕೆ ಮಾಡಿಸಿ 10 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಮಂಗಳೂರು ಸೈಬರ್ ಪೊಲೀಸರು ಆಂಧ್ರಪ್ರದೇಶ ಮೂಲದ ಆರೋಪಿಯನ್ನು ದೆಹಲಿ ಏರ್ಪೋರ್ಟ್ ನಲ್ಲಿ ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 09/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತರು ವಾಟ್ಸ್ ಆಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಸ್ಟೋಕ್ ಫ್ರಂಟ್ ಲೈನ್ ಎಂಬ ಲಿಂಕ್ ಅನ್ನು ಕಳುಹಿಸಿ ಫಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 10,84,017 ರೂ. ಹಣವನ್ನು ಪಡೆದು ವಂಚನೆ ಮಾಡಿದ್ದಾಗಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಸೈಬರ್ ಪೊಲೀಸರು ವಾಟ್ಸಪ್ ನಂಬರ್ ಆಧರಿಸಿ ತನಿಖೆ ನಡೆಸಿದ್ದು ಈ ವೇಳೆ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜು ಎಂಬಾತನ ಪತ್ತೆ ಮಾಡಲಾಗಿತ್ತು. ಕಳೆದ ಜೂನ್ ತಿಂಗಳಲ್ಲಿ ರಾಜುವನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಆತ ಭಾರತದಲ್ಲಿ ವಿವಿಧ ಮೊಬೈಲ್ ಕಂಪನಿಗಳ ಡೀಲರ್ ಗಳಿಂದ 500ಕ್ಕೂ ಹೆಚ್ಚು ಸಿಮ್ ಗಳನ್ನು ಪಡೆದು ವಿದೇಶಕ್ಕೆ ಪೂರೈಸುತ್ತಿದ್ದ ಎಂಬುದು ಬೆಳಕಿಗೆ ಬಂದಿತ್ತು. ರಾಜು ಬಳಿಯಿಂದ ಸಿಮ್ ಗಳನ್ನು ಪಡೆಯುತ್ತಿದ್ದ ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ನಿವಾಸಿ ಕಣಾತಲ ವಾಸುದೇವ ರೆಡ್ಡಿ(25) ದುಬೈನಲ್ಲಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ವಿಚಾರ ತಿಳಿದುಬಂದಿತ್ತು.
ಅದರಂತೆ, ವಾಸುದೇವ ರೆಡ್ಡಿ ಪತ್ತೆಗಾಗಿ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ಡಿ.18ರಂದು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ತೆರಳುತ್ತಿದ್ದಾಗ ಇಮ್ರಿಗೇಶನ್ ಅಧಿಕಾರಿಗಳು ವಾಸುದೇವ ರೆಡ್ಡಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಸೈಬರ್ ಪೊಲೀಸರು ದೆಹಲಿಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ದಸ್ತಗಿರಿ ಮಾಡಿದ್ದಾರೆ.
ನಕಲಿ ಷೇರು ಮಾರುಕಟ್ಟೆಯ ಏಪ್ ಬಳಸಿ ವಂಚಿಸುತ್ತಿದ್ದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಸದ್ಯಕ್ಕೆ ನಕಲಿ ಸಿಮ್ ಆಧರಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ್, ಸೆನ್ ಪೊಲೀಸ್ ಠಾಣೆ ನಿರೀಕ್ಷಕ ಸತೀಶ್ ಎಂ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Mangalore police arrest Odisha based accused at Delhi airport in share market fraud case.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm