ಬ್ರೇಕಿಂಗ್ ನ್ಯೂಸ್
24-12-24 11:05 pm Mangalore Correspondent ಕ್ರೈಂ
ಮಂಗಳೂರು, ಡಿ.24: ಮಂಗಳೂರು ಸೈಬರ್ ಪೊಲೀಸರು ನಕಲಿ ಷೇರು ಮಾರುಕಟ್ಟೆ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು ಮತ್ತೊಬ್ಬ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಮಂಗಳೂರಿನ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 09/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿ ಪ್ರಕರಣದಲ್ಲಿ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ ಸ್ಟಾಕ್ ಫ್ರಂಟ್ ಲೈನ್ ಎಂಬ ಲಿಂಕ್ ಕಳುಹಿಸಿ ಹಂತ ಹಂತವಾಗಿ ಒಟ್ಟು 10,84,017/- ಹಣವನ್ನು ಪಡೆದು ವಂಚನೆ ಮಾಡಿದ್ದು ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಮಂಗಳೂರಿನ ವ್ಯಕ್ತಿಯಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರ ಸಂಗ್ರಹಿಸಿದ ಪೊಲೀಸರು ಕೇರಳದ ಮಲಪ್ಪುರಂ ನಿವಾಸಿ ಜಾಫರ್ ಕೆ, (49) ಎಂಬಾತನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದ್ದನ್ನು ಪತ್ತೆ ಮಾಡಿ ಆತನ ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಪ್ರಕರಣದಲ್ಲಿ ವಾಟ್ಸಪ್ ಸಂಖ್ಯೆಯ ಬೆನ್ನತ್ತಿದ ಪೊಲೀಸರು ಒಡಿಶಾ ಮೂಲದ ವಾಸುದೇವ ರೆಡ್ಡಿ ಎಂಬುವನನ್ನು ದೆಹಲಿ ಏರ್ಪೋರ್ಟಿನಲ್ಲಿ ಬಂಧಿಸಿದ್ದರು. 500ಕ್ಕೂ ಹೆಚ್ಚು ಸಿಮ್ ಗಳನ್ನು ಬೇನಾಮಿ ಹೆಸರಲ್ಲಿ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು.
ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಎಂ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
Mangalore Fake share market racket busted, Kerala native arrested by cyber police. The arrested has been identified as Jaffer K.
03-04-25 09:44 pm
Bangalore Correspondent
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
03-04-25 11:10 pm
HK News Desk
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
03-04-25 10:14 pm
Dinesh Nayak, Mangaluru Correspondent
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm