ಬ್ರೇಕಿಂಗ್ ನ್ಯೂಸ್
26-12-24 07:41 pm Bangalore Correspondent ಕ್ರೈಂ
ಬೆಂಗಳೂರು, ಡಿ 26: ನಗರದಲ್ಲಿ ವಾಸವಾಗಿರುವ ಜಪಾನ್ ಮೂಲದ ಪ್ರಜೆಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 35.49 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಜಪಾನ್ ಮೂಲದ 59 ವರ್ಷದ ವ್ಯಕ್ತಿ ನೀಡಿರುವ ದೂರಿನ ಅನ್ವಯ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರುದಾರರಿಗೆ ಡಿಸೆಂಬರ್ 12ರಂದು ಟೆಲಿಫೋನ್ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಪ್ರತಿನಿಧಿಗಳ ಹೆಸರಿನಲ್ಲಿ ಕರೆ ಮಾಡಿದ್ದ ವಂಚಕರು, 'ನಂಬರ್ ಬ್ಲಾಕ್ ಮಾಡುತ್ತಿರುವುದಾಗಿ' ತಿಳಿಸಿದ್ದರು. ನಂತರ ಮುಂಬೈ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿದ್ದ ಮತ್ತೋರ್ವ ವಂಚಕ, 'ನೀವು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದೀರಿ'. ಆದ್ದರಿಂದ ತನಿಖೆಯ ಕಾರಣದಿಂದ ಡಿಜಿಟಲ್ ಅರೆಸ್ಟ್ ಮಾಡುತ್ತಿರುವುದಾಗಿ ಬೆದರಿಸಿದ್ದರು. ನಂತರ ವಿಚಾರಣೆಯ ಸಲುವಾಗಿ ಬ್ಯಾಂಕ್ ಖಾತೆಯನ್ನ ಪರಿಶೀಲಿಸಬೇಕಿದೆ. ತನಿಖೆ ಮುಗಿದ ಬಳಿಕ ನಿಮ್ಮ ಹಣ ಹಿಂದಿರುಗಿಸುತ್ತೇವೆ ಎಂದು ಡಿಸೆಂಬರ್ 12ರಿಂದ 14ರ ಅವಧಿಯೊಳಗೆ ಆರ್‌ಟಿಜಿಎಸ್, ಐಎಂಪಿಎಸ್ ಮೂಲಕ ಒಟ್ಟು 35.49 ಲಕ್ಷ ರೂ. ಹಣವನ್ನು ವಂಚಕರು ವರ್ಗಾಯಿಸಿಕೊಂಡಿದ್ದಾರೆ.
ಆದರೆ ಹಣ ಮರಳಿಸದಿದ್ದಾಗ ತಾವು ವಂಚನೆಗೊಳಗಾದ ಬಗ್ಗೆ ಅರಿತ ಜಪಾನ್ ಪ್ರಜೆ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿರುವುದಾಗಿ ತಿಳಿಸಿದರು.
ಡಿಜಿಟಲ್ ಅರೆಸ್ಟ್ ಬಗ್ಗೆ ತಿಳಿದುಕೊಳ್ಳಿ:
ಡಿಜಿಟಲ್ ಅರೆಸ್ಟ್ ಪ್ರಕರಣಗಳ ಬಗ್ಗೆ ಪೊಲೀಸರು ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಸಹ ವಂಚನೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಾನೂನಿನಲ್ಲಿ ಡಿಜಿಟಲ್ ಅರೆಸ್ಟ್ ಪದ್ಧತಿಯೇ ಇಲ್ಲ. ಯಾವುದೇ ತನಿಖಾ ಸಂಸ್ಥೆಗಳು ಡಿಜಿಟಲ್ ಅರೆಸ್ಟ್ ಮಾಡುವುದಿಲ್ಲ. ಅರೆಸ್ಟ್ ಮಾಡುವುದಾದರೆ ಮೊದಲು ನೋಟಿಸ್ ನೀಡಲಾಗುತ್ತದೆ ಅಥವಾ ಖುದ್ದಾಗಿ ಪೊಲೀಸರು ಭೇಟಿ ನೀಡಿ ಬಂಧಿಸುತ್ತಾರೆ. ಆದ್ದರಿಂದ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕರೆ ಮಾಡಿದರೆ ಜನರು ಜಾಗೃತರಾಗಬೇಕು. ಜೊತೆಗೆ, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಪೊಲೀಸರು ಈಗಾಗಲೇ ಜನರಿಗೆ ಸಲಹೆ ನೀಡಿದ್ದರು
ಇತ್ತೀಚೆಗೆ ಬೆಂಗಳೂರಿನ ಟೆಕ್ಕಿಯೊಬ್ಬರನ್ನು ವಂಚಕರು ಸುಮಾರು ಒಂದು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಹೆಸರಲ್ಲಿ 11 ಕೋಟಿಗೂ ಅಧಿಕ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು.
A 59-year-old Japanese national working in Bengaluru was allegedly defrauded of Rs 35.49 lakh after being threatened and placed under “digital arrest” by cybercriminals. The Bengaluru police described the case as rare, noting that “digital arrest” is a non-existent concept under Indian law.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm