ಬ್ರೇಕಿಂಗ್ ನ್ಯೂಸ್
03-01-25 11:02 pm Bangalore Correspondent ಕ್ರೈಂ
ಬೆಂಗಳೂರು, ಜ.3: ಜಮೀನು ವ್ಯಾಜ್ಯದ ಕುರಿತು ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆಯ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಮಧುಗಿರಿ ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯಕ್ಕೆ ಸಂಬಂದಿಸಿದಂತೆ ದೂರು ಕೊಡಲು ಬಂದ ಮಹಿಳೆಯನ್ನು ಮಧುಗಿರಿ ಉಪವಿಭಾಗದ ಡಿವೈಎಸ್‍ಪಿ ರಾಮಚಂದ್ರಪ್ಪ ತನ್ನ ಕಚೇರಿಯಲ್ಲೇ ಕಾಮತೃಷೆಗೆ ಬಳಸಿಕೊಂಡಿದ್ದ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‍ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.
ಇದರ ಬೆನ್ನಲ್ಲೇ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್‌ಐಆರ್ ದಾಖಲಿಸಿಕೊಂಡ ಮಧುಗಿರಿ ಪೊಲೀಸರು, ಡಿವೈಎಸ್‌ಪಿಯನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಮಹಿಳೆಯನ್ನು ಪುಸಲಾಯಿಸಿ ಕಾಮತೃಷೆ ತೀರಿಸಿಕೊಂಡಿದ್ದ !
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ಜಮೀನಿನ ಕುರಿತಾಗಿ ವ್ಯಾಜ್ಯ ಉಂಟಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ದೂರು ಹೇಳಿಕೊಂಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ, ನಾವು ವಿಚಾರಣೆಗೆ ಕರೆದಾಗ ಬರಬೇಕು ಎಂದಿದ್ದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬರುವಂತೆ ತಿಳಿಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾನೆ. ಈ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸಪ್ಪನ ಕ್ರೌರ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
Madhugiri DySP Ramachandrappa suspended and arrested after Sexual video with women inside office goes viral. In a shocking incident in Karnataka, a woman was allegedly molested by a police official at a police station in Madhugiri. A video of the alleged sexual harassment has also surfaced online. It is alleged that Ramachandrappa, Deputy Superintendent of Police (DySP) of Madhugiri division, behaved inappropriately with the woman who had arrived at the police station to file a land dispute complaint..
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm