ಬ್ರೇಕಿಂಗ್ ನ್ಯೂಸ್
17-01-25 03:02 pm Mangaluru Correspondent ಕ್ರೈಂ
ಉಳ್ಳಾಲ, ಜ.17: ಮಟ ಮಟ ಮಧ್ಯಾಹ್ನವೇ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ. ಬೀದರಿನಲ್ಲಿ ನಿನ್ನೆ ಎಟಿಎಂ ಹಣ ತುಂಬುವಾಗ ಗನ್ ಶೂಟ್ ಮಾಡಿದ ದರೋಡೆ ಬೆನ್ನಲ್ಲೇ ದಕ್ಷಿಣ ಕರ್ನಾಟಕದ ತುದಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ಕಾರಿನಲ್ಲಿ ಬಂದ ಆಗಂತುಕರಲ್ಲಿ ಐವರು ಬ್ಯಾಂಕ್ ಶಾಖೆಗೆ ನುಗ್ಗಿದ್ದು ಕಚೇರಿಯಲ್ಲಿದ್ದ ಸಿಬ್ಬಂದಿಗಳಿಗೆ ಮಾರಕಾಯುಧಗಳನ್ನ ತೋರಿಸಿ ಸುಮಾರು ಹತ್ತು ಕೋಟಿಗೂ ಅಧಿಕ ಬೆಲೆಬಾಳುವ ಚಿನ್ನಾಭರಣ, ಸುಮಾರು ಐದು ಲಕ್ಷ ರೂಪಾಯಿ ನಗದನ್ನ ದರೋಡೆಗೈದು ಮಂಗಳೂರು ಕಡೆ ಕಾರಿನಲ್ಲಿ ಪರಾರಿಯಾಗಿದ್ದಾರೆ.
ಕೆ.ಸಿ ರೋಡ್ ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ದರೋಡೆ ನಡೆದಿದೆ. ಬ್ಯಾಂಕಿನ ಕೆಳಗಿನ ಅಂತಸ್ತಿನ ಬೇಕರಿಯಲ್ಲಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಬ್ಯಾಂಕಿನ ಸಿಬ್ಬಂದಿಗಳ ಬೊಬ್ಬೆ ಕೇಳಿ ಮೇಲೆ ಓಡಿದ್ದಾರೆ. ವಿದ್ಯಾರ್ಥಿಗಳಿಗೆ ಆಗಂತುಕರು ಗನ್ ತೋರಿಸಿ ಬೆದರಿಸಿದ್ದಾರೆ.
ಎಸಿಪಿ ಧನ್ಯ ನಾಯಕ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳನ್ನ ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವಿಶೇಷ ಅಂದ್ರೆ, ಬ್ಯಾಂಕ್ ಒಳಗಿನ ಸಿಸಿಟಿವಿ ಕ್ಯಾಮೆರಾವನ್ನು ಸರ್ವಿಸ್ ಮಾಡುತ್ತಿದ್ದ ವೇಳೆಯೇ ಘಟನೆ ನಡೆದಿದೆ. ಹೊರಗಿನ ಕ್ಯಾಮೆರಾದಲ್ಲಿ ಆರೋಪಿಗಳು ಪಲಾಯನಗೈಯುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಬ್ಯಾಂಕ್ ಬಗ್ಗೆ ತಿಳಿದಿರುವ ಮಂದಿಯೇ ದರೋಡೆ ನಡೆಸಿರುವಂತೆ ಕಂಡುಬಂದಿದೆ.
Bank robbery in Kotekar Vyavasaaya Seva Sahakaari Bank, Armed gang robs gold, cash in daylight heist. A daring robbery was carried out in broad daylight at the Kotekar Cooperative Society Bank, K C Road branch, by a gang of five armed individuals.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm