ಬ್ರೇಕಿಂಗ್ ನ್ಯೂಸ್
20-01-25 10:18 pm HK News Desk ಕ್ರೈಂ
ಹುಬ್ಬಳ್ಳಿ, ಜ 20: ಜ.16 ರಂದು ಬೀದರ್ನನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲೂ ಇಂದು ಉದ್ಯೋಗಿ ಒಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ಹಣ ಲೂಟಿ ಮಾಡಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಈ ಮೂವರು ಘಟನೆಗಳು ಮಾಸುವ ಮುನ್ನವೇ ಹುಬ್ಬಳ್ಳಿಯ ಬ್ಯಾಂಕಿನಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಜರುಗಿದೆ.
ಕೆನರಾ ಬ್ಯಾಂಕಿಗೆ ಕನ್ನ ಹಾಕಲು ವಿಫಲ ಯತ್ನ;
ಸದ್ಯ, ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು, ನವನಗರದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ದರೋಡೆಗೆ ಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ (ಭಾನುವಾರ) ಬ್ಯಾಂಕ್ ಗೆ ಕನ್ನ ಹಾಕಲು ಖದೀಮರು ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನವನಗರದ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಬ್ಯಾಂಕ್ ನ ಶೆಲ್ಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿರುವ ಸಿಬ್ಬಂದಿ ನಡೆ;
ನವನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನಲ್ಲಿ ದೊಡ್ಡ ಮಟ್ಟದ ದರೋಡೆಗೆ ಪ್ರಯತ್ನ ನಡೆಸಿದರೂ ಕೂಡ ಬ್ಯಾಂಕಿನ ಸಿಬ್ಬಂದಿ ಇದುವರೆಗೂ ಯಾವುದೇ ದೂರು ನೀಡಿಲ್ಲ. ಈ ಘಟನೆಯು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸುವುದರ ಜೊತೆಗೆ, ಬ್ಯಾಂಕ್ ಸಿಬ್ಬಂಧಿ ನಡೆಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ದೂರು ನೀಡದ ಮ್ಯಾನೇಜರ್;
ಇನ್ನೊಂದೆಡೆ ಬ್ಯಾಂಕಿನ ಬಾಗಿಲು ಮುರಿದಿದ್ದು, ಗೇಟ್ ಮತ್ತು ಕೀಗೆ ಬ್ಯಾಂಕಿನ ಸಿಬ್ಬಂದಿ ವೆಲ್ಡಿಂಗ್ ಮಾಡಿಸಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಬ್ರಹ್ಮಾನಂದ್ ಅವರು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಮ್ಯಾನೇಜರ್ ದೂರು ನೀಡದೆ ಹಾರಿಕೆ ಉತ್ತರ ನೀಡ್ತಾ ಇದ್ದಾರೆ. ಬ್ಯಾಂಕ್ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರಾ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
Attempt to robbery at Hubballi canara bank after robbery at Bidar and Mangalore, case filed.
20-01-25 07:00 pm
HK News Desk
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
20-01-25 11:05 pm
Mangalore Correspondent
Mangalore, Ivan dsouza, CM Siddaramaiah: ಬಹು...
20-01-25 06:00 pm
International Kite Festival 2025, Thannirbhav...
18-01-25 09:27 pm
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
20-01-25 10:18 pm
HK News Desk
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm
Bidar Bank Robbery, bihar gang, Update: ಬೀದರ್...
19-01-25 07:52 pm