ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್‌ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್‌ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್‌ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್‌ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm