ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.
ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm