ಬ್ರೇಕಿಂಗ್ ನ್ಯೂಸ್
28-01-25 05:17 pm Mangalore Correspondent ಕ್ರೈಂ
ಮಂಗಳೂರು, ಜ 28: 14 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥನಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ. ಬಂಟ್ವಾಳ ತಾಲೂಕಿನ 24 ವರ್ಷದ ಯುವಕ ಶಿಕ್ಷೆಗೊಳಗಾದ ಅಪರಾಧಿ.
ಈ ಪ್ರಕರಣದ ಅಪರಾಧಿ ಯುವಕ 14 ವರ್ಷ ಪ್ರಾಯದ ಬಾಲಕಿಯನ್ನು ಮೊಬೈಲ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ಅನೋನ್ಯತೆಯಿಂದ ಮಾತನಾಡಿ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದನು. ಬಾಲಕಿಯ ತಾಯಿ ಅನಾರೋಗ್ಯದ ಕಾರಣ ಮಾತ್ರೆಗಳನ್ನು ತೆಗೆದುಕೊಂಡು ಮಲಗಿರುವಾಗ 2023ರ ಮೇ ತಿಂಗಳಿನಲ್ಲಿ ರಾತ್ರಿಯ ಸಮಯದಲ್ಲಿ ಬಾಲಕಿಯ ಮನೆಗೆ ಬಂದು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದನು ಎಂದು ಪ್ರಕರಣ ದಾಖಲಾಗಿತ್ತು
ನಂತರದ ದಿನಗಳಲ್ಲಿಯೂ ಸಹ ಯುವಕ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದನು. ನಂತರ ಬಾಲಕಿಯ ದೇಹದಲ್ಲಿ ಆದ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ 6 ತಿಂಗಳ ಗರ್ಭವತಿಯಾಗಿರುವುದು ತಿಳಿದುಬಂದಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂ 376 ರಡಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ನಗರ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ ಅವರು ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿತು. ಈ ಪ್ರಕರಣದಲ್ಲಿ ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸುತ್ತಾ ಬಂದಿದ್ದು, ನಂತರ ಮಗುವಿನ ಡಿಎನ್ಎ ಪರೀಕ್ಷೆಯಲ್ಲಿ ಆತನೇ ಮಗುವಿನ ಜೈವಿಕ ತಂದೆ ಎಂದು ವರದಿ ಬಂದಿತ್ತು.
ಈ ಪ್ರಕರಣದ ಸಾಕ್ಷ್ಯ, ದಾಖಲೆಗಳು ಹಾಗೂ ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿದ ಜಿಲ್ಲಾ ನ್ಯಾಯಾಧೀಶ ಮಾನು ಕೆ. ಎಸ್. ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿ ಯುವಕನಿಗೆ ಭಾರತೀಯ ದಂಡ ಸಂಹಿತೆಯ ಕಲಂ: 376(3), 376(2)(ಎನ್) ಮತ್ತು ಕಲಂ: 6 ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ: 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ ರೂಪಾಯಿ 6,50,000 ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶನ ನೀಡಲಾಗಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸ್ಪೆಶಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಬದರಿನಾಥ ನಾಯರಿ ಸಾಕ್ಷಿ ವಿಚಾರಣೆ ನಡೆಸಿ, ವಾದ ಮಂಡಿಸಿದ್ದರು.
24 year old gets 20 years of imprisonment for raping 14 year old girl at bantwal in Mangalore with a fine of Rs 50,000.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm