ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.
ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
16-04-25 06:42 pm
Bangalore Correspondent
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 08:22 pm
Mangalore Correspondent
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm