Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಶಾಲೆಯ ಮುಖ್ಯಸ್ಥನಿಂದಲೇ ನೀಚ ಕೃತ್ಯ , ಇಬ್ಬರ ಬಂಧನ ! 

06-02-25 12:00 pm       HK News Desk   ಕ್ರೈಂ

8 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.

ರಾಯಚೂರು, ಫೆ 06: 8 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.

ಮಾನವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆೆ. ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ಆಡಳಿತ ಮಂಡಳಿಯವರನ್ನು ಬಂಧಿಸಲಾಗಿದೆ. ಆರೋಪಿ ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.

ಎರಡನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಪ್ರತಿದಿನ ಶಾಲೆಯ ವಾಹನದಲ್ಲಿ ತೆರಳುತ್ತಿದ್ದಳು. ಹಾಗೆಯೇ ಬುಧವಾರ ಕೂಡ ಶಾಲೆಯ ವಾಹನದಲ್ಲೇ ತೆರಳಿದ್ದಳು. ಮಧ್ಯಾಹ್ನದ ವೇಳೆ ಅದೇ ಗ್ರಾಮದ ವ್ಯಕ್ತಿಯೋರ್ವ ಶಾಲೆಗೆ ತೆರಳಿ ನಿಮ್ಮ ತಾಯಿ ಕರೆಯುತ್ತಿದ್ದಾಳೆಂದು ಸುಳ್ಳು ಹೇಳಿ ಬಾಲಕಿಯನ್ನು ಶಾಲೆಯ ಬಳಿಯ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಗ್ರಾಮಕ್ಕೆ ಕರೆದುಕೊಂಡು ಬಿಟ್ಟು ಹೋಗಿದ್ದಾನೆ. ಈ ಕುರಿತು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಗೆ ಹಾಕಿದ್ದಾನೆ. ಪ್ರಕರಣದಲ್ಲಿ ಶಾಲೆಯ ಮುಖ್ಯಸ್ಥರು ಸಹ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿ ಶಿವನಗೌಡ ಮತ್ತು ಶಾಲೆಯ ಮುಖ್ಯಸ್ಥನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ವಿಚಾರ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Raichur second std minor girl raped by school head, two arrested. A case has been registered at the Manavi police station. Two including school head has been arrested.