ಬ್ರೇಕಿಂಗ್ ನ್ಯೂಸ್
08-02-25 01:00 pm HK News Desk ಕ್ರೈಂ
ಬೀದರ್, ಫೆ.8: ಮನೆಯವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ಕೋಪದಲ್ಲಿ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬರಗೇನ್ ತಾಂಡಾದಲ್ಲಿ ಶುಕ್ರವಾರ (ಫೆ.7) ಘಟನೆ ನಡೆದಿದ್ದು, ಮೋನಿಕಾ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.
'ಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ. ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ಮಗಳೊಂದಿಗೆ ತಂದೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್, ಸಂತಪೂರ ಪಿಎಸ್‌ಐ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 year old daughter killed by father for rejecting marriage proposal in Bidar. The disease as been identified as Monica Jadav. She was In love with another boy where the father got angry and killer right in the house
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm