ಬ್ರೇಕಿಂಗ್ ನ್ಯೂಸ್
09-02-25 07:35 pm Mangalore Correspondent ಕ್ರೈಂ
ಮಂಗಳೂರು, ಫೆ.9: ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ ಅಪರಾಧಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿದ ಆರೋಪ ಹೊತ್ತಿದ್ದ ಮಂಗಳೂರು ಹೊರವಲಯದ ತಲಪಾಡಿಯ ವ್ಯಕ್ತಿಯೊಬ್ಬರ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಮಾಡಿದೆ.
ತಲಪಾಡಿ ಗ್ರಾಮದ ಉದಯ ಕುಮಾರ್ ಶೆಟ್ಟಿ ಎಂಬವರು ತಮ್ಮ ಮೇಲಿನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಐಪಿಸಿ ಸೆಕ್ಷನ್ 216 (ಅಪರಾಧಿಗೆ ಉದ್ದೇಶಪೂರ್ವಕವಾಗಿ ಆಶ್ರಯ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾದಲ್ಲಿ ಆರೋಪಿಗೆ ಕೋರ್ಟಿನಲ್ಲಿ ಪ್ರಕರಣ ಸಾಬೀತಾದ ಅಪರಾಧಿಯ ಶಿಕ್ಷೆಯ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು, ಜತೆಗೆ ಉದ್ದೇಶಪೂರ್ವಕ ಆಶ್ರಯ ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸುವಂತಹ ಅಂಶಗಳು ಬೇಕಾಗುತ್ತವೆ ಎಂದು ಆದೇಶದಲ್ಲಿ ತಿಳಿಸಿದೆ.
ಅಪರಾಧಿಯನ್ನು ಅರ್ಜಿದಾರರ ಮನೆಯಲ್ಲಿಯೇ ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ ಅರ್ಜಿದಾರರಿಗೆ ಅಪರಾಧಿಯ ಶಿಕ್ಷೆಯ ಬಗ್ಗೆ ತಿಳಿದಿತ್ತು ಮತ್ತು ಅವರು ಉದ್ದೇಶಪೂರ್ವಕವಾಗಿ ಅಪರಾಧಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಪ್ರಕರಣ ರದ್ದುಪಡಿಸಲಾಗಿದೆ. ಜೊತೆಗೆ, ಸಾಕ್ಷ್ಯಾಧಾರಗಳಿಲ್ಲದೆ ಅರ್ಜಿದಾರರ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಕೊಲೆ ಅಪರಾಧಿಗೆ ಆಶ್ರಯ ನೀಡಿದ್ದಕ್ಕೆ ಕೇಸು
ಮಂಗಳೂರಿನ ಬರ್ಕೆ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣ ಒಂದರಲ್ಲಿ ಶರಣ್ ಪೂಜಾರಿ ಎಂಬಾತನಿಗೆ ಮಂಗಳೂರಿನ 5ನೇ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆರೋಪಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರಿಂದ ಬಂಧಿಸಲು ಹುಡುಕಾಟ ನಡೆಸಿದ್ದರು. ಈ ವೇಳೆ, ತಲಪಾಡಿಯ ಉದಯ ಕುಮಾರ್ ಶೆಟ್ಟಿ ಮನೆಯಲ್ಲಿ ಬಂಧಿಸಲಾಗಿತ್ತು. ಈ ಬಗ್ಗೆ ಪೊಲೀಸರು ಉದಯ ಶೆಟ್ಟಿ ವಿರುದ್ಧವೂ ಕೊಲೆ ಅಪರಾಧಿಗೆ ಆಶ್ರಯ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಉದಯ ಶೆಟ್ಟಿ ವಕೀಲರ ಮೂಲಕ ಹೈಕೋರ್ಟಿನಲ್ಲಿ ದಾವೆ ಹೂಡಿದ್ದರು.
Mangalore Accused Uday Kumar from talapady arrested for giving shelter to murder accused gets stay in high court.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm