ಬ್ರೇಕಿಂಗ್ ನ್ಯೂಸ್
15-02-25 05:08 pm HK News Desk ಕ್ರೈಂ
ಬೀದರ್, ಫೆ.15 : ಎಟಿಎಂಗೆ ಹಣ ತುಂಬಿಸುವ ವಾಹನ ಸಿಬಂದಿಗೆ ಗುಂಡು ಹಾರಿಸಿ ದರೋಡೆಗೈದ ಪ್ರಕರಣದಲ್ಲಿ ಇಬ್ಬರು ದರೋಡೆಕೋರರ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಿಹಾರ ಮೂಲದ ನಟೋರಿಯಸ್ ಇಬ್ಬರು ದರೋಡೆಕೋರರ ಗುರುತು ಪತ್ತೆಹಚ್ಚಿದ್ದು ಇವರ ಪತ್ತೆಗಾಗಿ ಕರ್ನಾಟಕ ಸರ್ಕಾರ ಸುಳಿವು ಕೊಟ್ಟವರಿಗೆ ಐದು ಲಕ್ಷ ಬಹುಮಾನ ಘೋಷಿಸಿದೆ.
ಬಿಹಾರದ ವೈಶಾಲಿ ಜಿಲ್ಲೆಯ ಫತೇಪುರ ಮೂಲದ ಅಮನ್ ಕುಮಾರ್ ರಾಜಕಿಶೋರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಅಲಿಯಾಸ್ ಅಶುತೋಷ್ ಶತ್ರುಘ್ನ ಪ್ರಸಾದ್ ಸಿಂಗ್ ಕೃತ್ಯ ಎಸಗಿದವರು ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರ ಸೇರಿದಂತೆ ತೆಲಂಗಾಣ ರಾಜ್ಯದ ಹಲವೆಡೆ ಇವರು ಇದೇ ರೀತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಉತ್ತರ ಪ್ರದೇಶದಲ್ಲಿ 2023ರಲ್ಲಿ ಎಟಿಎಂ ವಾಹನದಲ್ಲಿ ಒಯ್ಯುತ್ತಿದ್ದ ಹಣವನ್ನು ದರೋಡೆ ಮಾಡಿದ್ದರು. ಈಗಾಗಲೇ ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳು ಆರೋಪಿಗಳ ಸುಳಿವಿಗಾಗಿ ಬಹುಮಾನ ಘೋಷಿಸಿವೆ.

ದರೋಡೆಕೋರರ ಗುರುತು ಪತ್ತೆಯಾದ ನಂತರ ಬೀದರ್ ಜಿಲ್ಲಾ ಪೊಲೀಸರು ಬಿಹಾರದ ಹಲವೆಡೆ ‘ಬೇಕಾಗಿದ್ದಾರೆ’ ಎಂದು ಪೋಸ್ಟರ್ ಅಂಟಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹5 ಲಕ್ಷ ನಗದು ಬಹುಮಾನ ಕೂಡ ಘೋಷಿಸಿದ್ದಾರೆ.
ಈಗ ಕರ್ನಾಟಕ ಸರ್ಕಾರವೂ ದರೋಡೆ ಆರೋಪಿಗಳ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿದೆ. ಕಳೆದ ಜನವರಿ 16ರಂದು ಬ್ಯಾಂಕಿನಿಂದ ಎಟಿಎಂಗಳಿಗೆ ಜಮೆ ಮಾಡಲು ಹಣ ಕೊಂಡೊಯ್ಯುತ್ತಿದ್ದ ಎಸ್‌ಬಿಐನ ಸಿಎಂಎಸ್ ಕಂಪನಿಯ ಇಬ್ಬರು ನೌಕರರ ಮೇಲೆ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದು ಹಣವಿದ್ದ ಟ್ರಂಕ್‌ನೊಂದಿಗೆ ಬೈಕ್ ನಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಘಟನೆಯಲ್ಲಿ ಸಿಎಂಎಸ್ ಕಂಪನಿಯ ಕ್ಯಾಶ್ ಕಸ್ಟೋಡಿಯನ್ ಗಿರಿ ವೆಂಕಟೇಶ ಸ್ಥಳದಲ್ಲೇ ಮೃತಪಟ್ಟಿದ್ದರು. ಶಿವಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದರು.
Photos of Wanted criminals in Bidar Bank robbery case released, cash reward of 5 lakhs announced. Bike-borne armed robbers shot dead two security guards before decamping with Rs 93 lakh cash meant for filling the SBI ATM in the district headquarters.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm