ಬ್ರೇಕಿಂಗ್ ನ್ಯೂಸ್
16-02-25 08:40 pm Mangalore Correspondent ಕ್ರೈಂ
ಮಂಗಳೂರು, ಫೆ.16: ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಸಿಂಗಾರಿ ಬೀಡಿ ಮಾಲೀಕ ಬೋಳಂತೂರು ನಿವಾಸಿ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣದಲ್ಲಿ ವಿಟ್ಲ ಪೊಲೀಸರು ಕೇರಳ ಮೂಲದ ಪೊಲೀಸ್ ಅಧಿಕಾರಿಯೊಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
2025ರ ಜ.3ರಂದು ಸಿಂಗಾರಿ ಬೀಡಿ ಮಾಲೀಕ ಸುಲೇಮಾನ್ ಅವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ನುಗ್ಗಿದ್ದ ದರೋಡೆಕೋರರು ಕೋಟ್ಯಂತರ ರೂಪಾಯಿ ನಗದು ಹಣವನ್ನು ದರೋಡೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇದಕ್ಕೂ ಮೊದಲೇ ಕೇರಳದ ಕೊಲ್ಲಂ ನಿವಾಸಿಗಳಾದ ಅನಿಲ್ ಫೆರ್ನಾಂಡಿಸ್(49), ಸಚಿನ್ ಡಿ.ಎಸ್(29) ಮತ್ತು ಶಬಿನ್ ಎಸ್.(27) ಎನ್ನುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ತ್ರಿಶೂರು ಕೊಡಂಗಲ್ಲೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಶಫೀರ್ ಬಾಬು (49) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉಳಿದಂತೆ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಆಪ್ತ ಕೊಳ್ನಾಡು ನಿವಾಸಿ ಸಿರಾಜುದ್ದೀನ್ ನಾರ್ಶ(37), ಬಂಟ್ವಾಳದ ಕುಖ್ಯಾತ ದರೋಡೆಕೋರ, ಮಟನ್ ಇಕ್ಬಾಲ್ ಯಾನೆ ಮೊಹಮ್ಮದ್ ಇಕ್ಬಾಲ್(38), ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (27) ಬಂಧಿತ ಆರೋಪಿಗಳು. ಕೇರಳದ ಕೊಡಂಗಲ್ಲೂರು ಪೊಲೀಸ್ ಠಾಣೆಯ ಎಎಸ್ಐ ಶಫೀರ್ ಬಾಬು ದರೋಡೆ ಪ್ರಕರಣದ ಸೂತ್ರಧಾರನಾಗಿದ್ದು ನಕಲಿ ಇಡಿ ಅಧಿಕಾರಿಗಳ ತಂಡವನ್ನು ಕಟ್ಟಿ ತನ್ನ ಪಾಲಿನ ಮೊತ್ತವನ್ನು ಪಡೆದುಕೊಂಡಿದ್ದಾನೆ ಎನ್ನಲಾಗುತ್ತಿದೆ.
ಶಫೀರ್ ಬಾಬು ಮತ್ತು ಮಟನ್ ಇಕ್ಬಾಲ್ ದರೋಡೆ ಕಿಂಗ್ ಪಿನ್ ಗಳಾಗಿದ್ದು ಮಂಗಳೂರಿನಲ್ಲಿ ಕುಳಿತು ದರೋಡೆಯ ಪ್ಲ್ಯಾನ್ ಮಾಡಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ ದರೋಡೆ ನಂತರ ಪೊಲೀಸರಿಂದ ತಪ್ಪಿಸಿಕೊಳ್ಳುವ ಬಗ್ಗೆ ಶಫೀರ್ ಬಾಬು ದರೋಡೆಕೋರರಿಗೆ ಮಾಹಿತಿ ನೀಡಿದ್ದ ಎಂದು ಹೇಳಲಾಗಿದೆ. ದರೋಡೆ ಬಳಿಕ ಈತ ತನ್ನ ಮೊತ್ತ ಪಡೆದ ಬಳಿಕ ಎಂದಿನಂತೆ ಪೊಲೀಸ್ ಕೆಲಸಕ್ಕೆ ಹಾಜರಾಗುತ್ತಿದ್ದ. ಬಂಟ್ವಾಳ- ವಿಟ್ಲ ಪೊಲೀಸರು ತಂಡ ರಚಿಸಿ, ಖಚಿತ ಮಾಹಿತಿಯೊಂದಿಗೆ ಕೇರಳಕ್ಕೆ ತೆರಳಿ ದಾಳಿ ಮಾಡುವ ಮಾಹಿತಿ ತಿಳಿದು ದರೋಡೆಕೋರರು ಪರಾರಿಯಾಗುವಂತೆ ನೋಡಿಕೊಂಡಿದ್ದ. ಮಟನ್ ಇಕ್ಬಾಲ್ ವಿರುದ್ಧ 15 ಕ್ಕೂ ಹೆಚ್ಚು ಕೇಸುಗಳಿವೆ.
ಪ್ರಕರಣದಲ್ಲಿ ಪೊಲೀಸರು ಪ್ರಮುಖ ಘಟ್ಟ ತಲುಪಿದ್ದು, ಇನ್ನೂ ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇ.ಡಿ ಅಧಿಕಾರಿಯಂತೆ ನಟಿಸಿದ ಪ್ರಧಾನ ಆರೋಪಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ.
Singari beedi house robbery, Kerala police officer among 4 arrested by Mangalore police. In a shocking twist to the Bolanthur robbery case, where criminals impersonated Enforcement Directorate (ED) officials to raid the house of Narsh Sulaiman Haji, an assistant sub-inspector from Kerala’s Thrissur district has been arrested along with three more accused. The gang had duped a businessman of Rs 30 lac in Bolanthuru's Narsha, under Vittal
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm