ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್‌ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್‌ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm