ಬ್ರೇಕಿಂಗ್ ನ್ಯೂಸ್
24-02-25 07:08 pm Bangalore Correspondent ಕ್ರೈಂ
ಬೆಂಗಳೂರು, ಫೆ.24 : ದೂರು ನೀಡಲು ಠಾಣೆಗೆ ಬಂದಿದ್ದ ಅಪ್ರಾಪ್ತ ಆತ್ಯಾಚಾರ ಸಂತ್ರಸ್ತೆಯನ್ನು ಸಹಾಯ ಮಾಡುವ ನೆಪದಲ್ಲಿ ಪುಸಲಾಯಿಸಿ ಪೊಲೀಸ್ ಪೇದೆಯೇ ಮತ್ತೆ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧಿಸಿ ಪೊಲೀಸ್ ಕಾನ್ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನ ವಿರುದ್ಧ ಮೈಕೋ ಲೇಔಟ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. 17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ, ವಿವಾಹಿತ ವ್ಯಕ್ತಿಯೊಬ್ಬ ಪರಿಚಯವಾಗಿದ್ದು ಪ್ರೀತಿಯ ನಾಟಕವಾಡಿದ್ದ. ಪ್ರೀತಿಸಿ ಮದುವೆ ಮಾಡಿಕೊಳ್ಳೋದಾಗಿ ನಂಬಿಸಿ, ಬಾಲಕಿ ಮೇಲೆ ನಿರಂತರ ಆತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ನೊಂದ ಅಪ್ರಾಪ್ತ ಬಾಲಕಿ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು.
ಈ ಬಗ್ಗೆ ದೂರು ನೀಡಲು ಹೋಗಿದ್ದ ಸಂತ್ರಸ್ತೆಯನ್ನು ಅದೇ ಠಾಣೆಯ ಕಾನ್ಸ್ಟೇಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯ ಕೊಡಿಸುವುದಾಗಿ ಹೇಳಿ ನಂಬಿಕೆ ಹುಟ್ಟಿಸಿದ್ದ. ಅಲ್ಲದೆ, ಕೆಲಸ ಕೊಡಿಸುವುದಾಗಿ ನಂಬಿಸಿ ಕಳೆದ ಡಿಸೆಂಬರ್ ನಲ್ಲಿ ಬಿಟಿಎಂ ಲೇಔಟ್ ನಲ್ಲಿರುವ ಲಾಡ್ಜ್ ರೂಮಿಗೆ ಕರೆಸಿಕೊಂಡು ಬಾಲಕಿಗೆ ಮದ್ಯದಲ್ಲಿ ಅಮಲು ಔಷಧಿ ಬೆರೆಸಿ ಕುಡಿಸಿ ಆಕೆ ಮೇಲೆ ಆತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಇಬ್ಬರ ವಿರುದ್ಧ ಪೋಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣ ವರ್ಗಾಯಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿರುವುದಾಗಿ ಬೊಮ್ಮನಹಳ್ಳಿ ಪೊಲೀಸರು ತಿಳಿಸಿದ್ದಾರೆ.
In a shocking incident in Bangalore, a police constable has been accused of raping a victim who had approached him for assistance after experiencing sexual assault. The victim, who had come to the Bommanahalli police station to file her complaint, reported that the constable deceived her into believing he would help her. Instead, he allegedly took her to a nearby lodge, where he assaulted her.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm