ಬ್ರೇಕಿಂಗ್ ನ್ಯೂಸ್
01-03-25 05:54 pm HK News Desk ಕ್ರೈಂ
ಬೆಂಗಳೂರು, ಮಾ.1: ಕೇವಲ ಮೂರೇ ವರ್ಷದಲ್ಲಿ ರಾಯಲ್ ಎನ್ಫೀಲ್ಡ್ ಸೇರಿದಂತೆ 100ಕ್ಕೂ ಅಧಿಕ ದುಬಾರಿ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಆಂಧ್ರಪ್ರದೇಶ ಮೂಲದ ಕತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿ ಪ್ರಸಾದಬಾಬು ಎಂಬಾತನನ್ನು ಬೆಂಗಳೂರಿನ ಕೆಆರ್ ಪುರ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬೈಕ್ ಗಳ ಕಳ್ಳತನವನ್ನೇ ತನ್ನ ವೃತ್ತಿಯಾಗಿಸಿಕೊಂಡಿದ್ದ ಈತ ದುಬಾರಿ ಬೈಕ್ಗಳನ್ನೇ ಟಾರ್ಗೆಟ್ ಮಾಡ್ತಿದ್ದ. ಲಕ್ಷಾಂತರ ಮೌಲ್ಯದ ಬೈಕ್ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಾಟ ಮಾಡಿ ದುಡ್ಡು ಮಾಡಿಕೊಳ್ಳುತ್ತಿದ್ದ. ಕೇವಲ ಮೂರು ವರ್ಷಗಳಲ್ಲಿ ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕದ್ದಿದ್ದು ಸೆಂಚುರಿ ಬಾರಿಸಿದ್ದಾನೆ.
ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಚಿಟಕಿ ಹೊಡೆಯುವುದರಲ್ಲಿ ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಅದೇ ಹಣದಲ್ಲಿ ಮೋಜು ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿದ್ದಾನೆ. 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಅವುಗಳನ್ನು ಆಂಧ್ರ ಪ್ರದೇಶದ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದ.

ಬಸ್ಸಿನಲ್ಲಿ ಬಂದು ಬೈಕ್ ನಲ್ಲಿ ಆಂಧ್ರ ಪ್ರದೇಶಕ್ಕೆ ಪರಾರಿ!
ಸಾಧಾರಣವಾಗಿ ಸಂಜೆ ಹೊತ್ತಿಗೆ ಆಂಧ್ರಪ್ರದೇಶದಿಂದ ಬಸ್ನಲ್ಲಿ ಬೆಂಗಳೂರಿಗೆ ಬರುತ್ತಿದ್ದ. ನಂತರ ಕೆ.ಆರ್.ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ದುಬಾರಿ ಬೈಕ್ಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ. ಹೆಡ್ ಲೈಟ್ ತೆಗೆದು ಲಾಕ್ ಆಗಿದ್ದ ವೈರನ್ನು ಜೋಡಿಸಿ ಸ್ಟಾರ್ಟ್ ಮಾಡುತ್ತಿದ್ದ. ಬಳಿಕ ಅದೇ ಬೈಕ್ನಲ್ಲಿ ರಾತ್ರಿಯೇ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ. ಒಟ್ಟು 20 ರಾಯಲ್ ಎನ್ಫೀಲ್ಡ್, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಸ್ಕೂಟರ್ ಗಳನ್ನು ಸೇರಿ ಹಲವು ದುಬಾರಿ ಬೈಕ್ಗಳನ್ನು ಕದ್ದಿದ್ದಾನೆ. ಸದ್ಯಕ್ಕೆ 1.45 ಕೋಟಿ ರೂ. ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು ಕೆ.ಆರ್ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a significant breakthrough for local law enforcement, the KR Puram Police have arrested a notorious interstate bike lifter and recovered an astonishing 100 stolen two-wheelers valued at ₹1.4 crore. The accused, identified as Prasad Babu from Chittoor in Andhra Pradesh, has been linked to over 150 bike theft cases across multiple states, including Andhra Pradesh, Telangana, Karnataka, and Tamil Nadu.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm