ಬ್ರೇಕಿಂಗ್ ನ್ಯೂಸ್
05-03-25 10:24 am HK News Desk ಕ್ರೈಂ
ಬೆಳಗಾವಿ, ಮಾ 05: ಪ್ರೇಯಸಿಯನ್ನು ಹತ್ಯೆ ಮಾಡಿ ಪ್ರೇಮಿಯೂ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಹಾಪುರದ ನಾಥಪೈ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರಶಾಂತ ಕುಂಡೇಕರ್ (29), ಐಶ್ವರ್ಯ ಲೋಹಾರ ಮೃತ ದುರ್ದೈವಿಗಳು. ಇಬ್ಬರ ಕುಟುಂಬಗಳಲ್ಲೂ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಪ್ರೇಯಸಿ ಐಶ್ವರ್ಯಗೆ ಮೊದಲು ಕತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ.
ಕಳೆದ ಒಂದು ವರ್ಷದಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ವೃತ್ತಿಯಲ್ಲಿ ಪ್ರಶಾಂತ ಕುಂಡೇಕರ್ ಪೇಂಟರ್ ಆಗಿದ್ದ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಇದೊಂದು ಬಹಳ ದುಃಖಕರ ಘಟನೆ. ಐದು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಹುಡುಗ ಮತ್ತು ಹುಡುಗಿಯ ನಡುವೆ ಪ್ರೇಮವಿತ್ತು. ಹುಡುಗ ಮದುವೆಗೆ ಒತ್ತಾಯಿಸುತ್ತಿದ್ದ. ಚೆನ್ನಾಗಿ ಕೆಲಸ ಮಾಡಿ ಸಂಬಳ ಜಾಸ್ತಿ ಮಾಡಿಕೊ ಎಂದು ಹುಡುಗಿ ತಾಯಿ ಹೇಳಿದ್ದರು. ಆದರೂ, ಹುಡುಗ ಹುಡುಗಿಗೆ ಮದುವೆ ಮಾಡಿಕೊಳ್ಳೋಣ ಎಂದು ಒತ್ತಾಯಿಸಿದ್ದಾನೆ. ಇಂದು ಬರುವಾಗ ಜೊತೆಗೆ ವಿಷದ ಬಾಟಲಿ ಕೂಡ ತಂದಿದ್ದ. ಮೊದಲು ಹುಡುಗ ಚಾಕುವಿನಿಂದ ಇರಿದಿದ್ದಾನೆ. ನಂತರ ಕುತ್ತಿಗೆ ಕುಯ್ದುಕೊಂಡು ಹುಡುಗನೂ ಸಹ ಮೃತಪಟ್ಟಿದ್ದಾನೆ ಎಂದು ಅವರು ಘಟನೆಯ ಮಾಹಿತಿ ನೀಡಿದರು.
ಹುಡುಗ ಪೇಂಟಿಂಗ್ ಮಾಡ್ತಿದ್ದ. ಕೊಲೆ ನಡೆದಿರುವುದು ಹುಡುಗಿಯ ಚಿಕ್ಕಮ್ಮನ ಮನೆಯಲ್ಲಿ. ಕೊಲೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಹುಡುಗ ಯಳ್ಳೂರು ಗ್ರಾಮದವನು. ಒಂದೂವರೇ ವರ್ಷದಿಂದ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದರು. ಹುಡುಗಿಯೂ ಸಹ ಮೇಜರ್ ಇದ್ದಾರೆ, ತನಿಖೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
In a shocking turn of events, a young couple's love story has ended in tragedy as Prashanth, 29, allegedly killed his girlfriend Aishwarya, 21, before taking his own life. The incident occurred earlier today, sending shockwaves through the local community.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm