ಬ್ರೇಕಿಂಗ್ ನ್ಯೂಸ್
10-03-25 10:48 pm HK News Desk ಕ್ರೈಂ
ಪಾಟ್ನಾ, ಮಾ.10 : ಬಿಹಾರದ ಭೋಜ್‌ಪುರ ಜಿಲ್ಲೆಯ ಗೋಪಾಲ್ ಚೌಕ್‌ನಲ್ಲಿ ಫಿಲ್ಮೀ ಶೈಲಿಯಲ್ಲಿ ಜುವೆಲ್ಲರಿಯನ್ನು ದರೋಡೆ ಮಾಡಲಾಗಿದೆ. ಏಳು ಮಂದಿ ದರೋಡೆಕೋರರು ಆಭರಣ ಮಳಿಗೆಗೆ ನುಗ್ಗಿ ಗನ್ ತೊಕರಿಸಿ ಕೇವಲ ಎಂಟು ನಿಮಿಷಗಳಲ್ಲಿ ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಸೋಮವಾರ ಬೆಳಗ್ಗೆ 10.30ರ ವೇಳೆಗೆ ತನಿಷ್ಕ್ ಆಭರಣ ಶೋರೂಮ್ ಓಪನ್ ಆದ ಕೆಲ ಹೊತ್ತಿನಲ್ಲೇ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ಅಲ್ಲಿದ್ದ ಗ್ರಾಹಕರು ಮತ್ತು ಸಿಬಂದಿಯನ್ನು ಕೈ ಮೇಲೆತ್ತುವಂತೆ ಆರ್ಡರ್ ಮಾಡಿದ್ದಾರೆ. ಬಳಿಕ ಎದುರಿದ್ದ ಚಿನ್ನದ ಆಭರಣಗಳನ್ನು ಕಿತ್ತುಕೊಂಡಿದ್ದು ಕೈಗೆ ಸಿಕ್ಕ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಆಭರಣ ಮಳಿಗೆಯಲ್ಲಿದ್ದವರನ್ನು ಗನ್ ಪಾಯಿಂಟ್‌ನಲ್ಲಿ ಬೆದರಿಸಿ ಚಿನ್ನವನ್ನು ಲೂಟಿ ಮಾಡಿದ್ದಾರೆ.
ದರೋಡೆ ವೇಳೆ ಕುಳಿತ ಸ್ಥಾನದಿಂದ ಎದ್ದು ಬಂದ ಮ್ಯಾನೇಜರ್ ಮೇಲೆ ದರೋಡೆಕೋರರು ಹಲ್ಲೆ ಮಾಡಿದ್ದಾರೆ. 8 ನಿಮಿಷದಲ್ಲಿ ಚಿನ್ನಾಭರಣ ಸೇರಿ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ದರೋಡೆಕೋರರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಲ್ಲಾ ಮುಗಿದ ಮೇಲೆ ಎಂದಿನಂತೆ ಪೊಲೀಸರು ಎಂಟ್ರಿ ಕೊಟ್ಟು ತನಿಖೆ ನಡೆಸಿದ್ದಾರೆ. ಚೇಸ್ ಮಾಡಿ ಇಬ್ಬರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಈ ಕುರಿತು ಮಾತನಾಡಿರುವ ಶೋರೂಂ ಮ್ಯಾನೇಜರ್ ಕುಮಾರ್ ಮೃತ್ಯುಂಜಯ್, ಕಳ್ಳರು ನಗದು ಜೊತೆಗೆ ಚಿನ್ನದ ಸರಗಳು, ನೆಕ್ಲೇಸ್‌ಗಳು, ಬಳೆ ಮತ್ತು ಕೆಲವು ವಜ್ರ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ತಿಳಿಸಿದ್ದಾರೆ.
ಕಾರಿನಲ್ಲಿ ಐದಾರು ಮಂದಿ ಬಂದಿದ್ದು ಶೋರೂಮ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಏಕಕಾಲದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಒಳಹೋಗಲು ಅವಕಾಶ ಇಲ್ಲದ ಕಾರಣ ಅಡ್ಡಿ ಪಡಿಸಿದಾಗ, ಗನ್ ತೋರಿಸಿ ಬೆದರಿಸಿದ್ದಾರೆ. ಆಬಳಿಕ ಚಿನ್ನಾಭರಣ ದೋಚಿದ್ದಾರೆ ಎಂದು ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ.
The heist, which was captured on CCTV inside the showroom, took place at the Gopali Chowk branch, located in the Arrah police station area.According to showroom manager Kumar Mrityunjay, in addition to cash, the robbers took away a range of valuables, including gold chains, necklaces, bangles and some diamonds.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm