ಬ್ರೇಕಿಂಗ್ ನ್ಯೂಸ್
18-03-25 06:31 pm Mangalore Correspondent ಕ್ರೈಂ
ಮಂಗಳೂರು, ಮಾ.18 : ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪ್ರಕರಣದಲ್ಲಿ ದೆಹಲಿಯ ನಾರ್ಕೋಟಿಕ್ ಕ್ರೈಮ್ ಬ್ಯೂರೋ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಬಂಧನ ಆಗಿರುವುದರಿಂದ ಅಲ್ಲಿಂದಲೇ ತನಿಖೆ ಎತ್ತಿಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಾದ ದಕ್ಷಿಣ ಆಫ್ರಿಕಾ ಮೂಲದ ಬಾಂಬಾ ಫಾಂಟಾ ಹಾಗು ಅಜಿಗೈಲ್ ಅಡೋನಿಸ್ ಅವರನ್ನು ಮಂಗಳೂರು ಪೊಲೀಸರು 7 ದಿನಗಳ ಕಾಲ ಕಸ್ಟಡಿ ಪಡೆದಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿರುವುದು ಪತ್ತೆಯಾಗಿದ್ದರಿಂದ ರಾಜಧಾನಿ ಆಸುಪಾಸಿನಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ತಯಾರಿ ಆಗುತ್ತಿರುವ ಅನುಮಾನಗಳಿವೆ. ದೆಹಲಿಯ ಕೈಗಾರಿಕಾ ಏರಿಯಾದಲ್ಲೇ ಡ್ರಗ್ಸ್ ತಯಾರಿ ನಡೆಸುತ್ತಿರುವ ಮಾಹಿತಿಯಿದ್ದು ಮಂಗಳೂರು ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.
ದೆಹಲಿ ಕೇಂದ್ರೀಕರಿಸಿ ದೇಶದ ಹಲವಾರು ಭಾಗಗಳಲ್ಲಿ ಡ್ರಗ್ಸ್ ಸಾಮ್ರಾಜ್ಯ ಹರಡಿಕೊಂಡಿದ್ದು ದೇಸೀ ವಿಮಾನದಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಡ್ರಗ್ಸ್ ರವಾನೆ ಆಗುತ್ತಿರುವ ವಿಚಾರ ತನಿಖೆಯಲ್ಲಿ ಬಯಲಾಗಿದ್ದು ಆತಂಕ ಮೂಡಿಸಿದೆ. ಆರೋಪಿಗಳ ಮಾಹಿತಿ ಆಧರಿಸಿ ಮಂಗಳೂರು ಪೊಲೀಸರು ದೆಹಲಿಗೂ ತನಿಖೆ ವಿಸ್ತರಿಸಿದ್ದಾರೆ. ಬಂಧಿತ ಮಹಿಳೆಯರು ಡ್ರಗ್ಸ್ ಕ್ಯಾರಿಯರ್ ಆಗಿ ಕೆಲಸ ಮಾಡುತ್ತಿದ್ದು ಪ್ರಮುಖ ನಗರಗಳಿಗೆ ಖುದ್ದಾಗಿ ತೆರಳಿ ಪೂರೈಕೆ ಮಾಡುತ್ತಿದ್ದರು.
ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು ಬಯಲಿಗೆಳೆದಿರುವ ಡ್ರಗ್ಸ್ ಜಾಲದ NCB ಅಧಿಕಾರಿಗಳು ಮತ್ತಷ್ಟು ಆಳವಾಗಿ ತನಿಖೆ ನಡೆಸಲಿದ್ದು ಎಲ್ಲಿಂದ ಪೂರೈಕೆ ಆಗುತ್ತದೆ ಮತ್ತು ಇದರ ಹಿಂದೆ ಯಾರಿದ್ದಾರೆ ಎನ್ನುವ ವಿಚಾರದ ಬಗ್ಗೆ ತನಿಖೆ ನಡೆಸಲಿದ್ದಾರೆ.
Mangalore Massive Drug Bust, Delhi NCB Investigates Suspected Drug Factory in Bangalore. In a significant operation, law enforcement has uncovered a massive drug bust in Mangalore, raising concerns about the drug trade in the region. The Delhi Narcotics Control Bureau (NCB) has stepped in, launching an investigation into a suspected drug factory located in Bangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm