ಬ್ರೇಕಿಂಗ್ ನ್ಯೂಸ್
20-03-25 03:22 pm HK News Staff ಕ್ರೈಂ
ರಾಮನಗರ, ಮಾ.20: ಬೆಂಗಳೂರು- ಮೈಸೂರು ರಸ್ತೆಯ ಬಿಡದಿಯ ಪ್ರತಿಷ್ಠಿತ ಕಂಪನಿಯೊಂದರ ಕಾರ್ಖಾನೆ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕರ್ನಾಟಕ ಮೂಲದ ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಪರ ಬರಹ ಬರೆದಿದ್ದಲ್ಲದೆ, ಕನ್ನಡಿಗರ ಬಗ್ಗೆಯೂ ಅವಹೇಳನ ಪದ ಬಳಸಿದ್ದರು. ದೇಶದ್ರೋಹದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದರು. ಕಾರ್ಖಾನೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು, ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿ ಪಾಳಿಯಲ್ಲಿ 600 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮಾರ್ಚ್ 16ರಂದು ಮೊದಲನೇ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಕಿಡಿಗೇಡಿಗಳು, ಈ ರೀತಿ ಬರೆದಿದ್ದಾರೆ. ಆರಂಭದಲ್ಲಿ ಈ ವಿಚಾರವನ್ನು ಕಂಪನಿ ಮುಚ್ಚಿ ಹಾಕಲು ಪ್ರಯತ್ನಿಸಿತ್ತು. ನೋಟಿಸ್ ಬೋರ್ಡ್ ನಲ್ಲಿ ಈ ರೀತಿ ಮಾಡದಂತೆ ಎಚ್ಚರಿಕೆ ಕೊಡಲಾಗಿತ್ತು. ನಂತರ ಇವರ ಬರಹದ ಫೋಟೊ ವೈರಲ್ ಆಗಿದ್ದು, ಬಿಡದಿ ಪೊಲೀಸರು ತನಿಖೆ ಕೈಗೆತ್ತಿಕೊಂಡು ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.
ವಿಷಯ ಬೆಳಕಿಗೆ ಬರುತ್ತಿದ್ದಂತೆ ಕನ್ನಡ ಪರ ಸಂಘಟನೆಗಳು ಕಾರ್ಖಾನೆ ಬಳಿ ಜಮಾಯಿಸಿದ್ದರು. ಪ್ರತಿಭಟನೆ ನಡೆಸಿ ಕಂಪನಿಯ ಆಡಳಿತ ಮಂಡಳಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ದೇಶದ್ರೋಹಿ ಪದ ಬಳಸಿದ ಹಾಗೂ ಕನ್ನಡಿಗರನ್ನು ನಿಂದಿಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.
ಛೇಡಿಸಿದ್ದಕ್ಕೆ ಕೃತ್ಯ ;
ಇತ್ತೀಚೆಗೆ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ಮಾರ್ಚ್ 9ರಂದು ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದು ಟ್ರೋಫಿ ತನ್ನದಾಗಿಸಿತ್ತು. ಇದೇ ವಿಷಯದಲ್ಲಿ ಕೆಲವು ಸಹೋದ್ಯೋಗಿಗಳು ಆರೋಪಿಗಳನ್ನು ಆಗಾಗ ಛೇಡಿಸುತ್ತಿದ್ದರು. ಇವರ ನಡುವೆ ಬಿಸಿ ಬಿಸಿ ಚರ್ಚೆಯೂ ನಡೆದಿತ್ತು. ಅದನ್ನೇ ಮನಸ್ಸಲ್ಲಿಟ್ಟುಕೊಂಡಿದ್ದ ಆರೋಪಿಗಳು ತಮ್ಮನ್ನು ಛೇಡಿಸಿದವರಿಗೆ ತಿರುಗೇಟು ನೀಡುವುದಕ್ಕಾಗಿ ಮಾರ್ಚ್ 14ರಂದು ಬೆಳಗ್ಗೆ ಶೌಚಾಲಯಕ್ಕೆ ಹೋಗಿದ್ದಾಗ ಗೋಡೆ ಮೇಲೆ, ‘ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಘೋಷಣೆಗಳ ಜೊತೆಗೆ, ಕನ್ನಡಿಗರನ್ನು ಕೆಟ್ಟದಾಗಿ ನಿಂದಿಸಿ ಬರೆದಿದ್ದರು.
Bidadi Police arrested two individuals on Wednesday in connection with the case of pro-Pakistan graffiti found on the bathroom walls of the Toyota factory near Bidadi town, close to Bengaluru, in Ramanagar district. The accused have been identified as 24-year-old Haimad Hussain and 20-year-old Sadiq, both contract workers at the Toyota Boshoku Automotive India Company factory. They hail from the northern Karnataka region.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm