ಬ್ರೇಕಿಂಗ್ ನ್ಯೂಸ್
20-03-25 04:13 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಗೂಗಲ್ ನಲ್ಲಿ ಪೇಯಿಂಗ್ ಗೆಸ್ಟ್ ಬಗ್ಗೆ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟು ಚೆನ್ನಾಗಿಲ್ಲ ಎಂದು ಕಮೆಂಟ್ ಹಾಕಿದ್ದಕ್ಕೆ ಪಿಜಿ ಮಾಲೀಕ ಮತ್ತು ಆತನ ಪಟಾಲಂ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿರುವ ಕಲಬುರಗಿ ಜಿಲ್ಲೆಯ ಮೂಲದ ವಿಕಾಸ್ (18) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಮಾರ್ಚ್ 17ರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದು, ಕದ್ರಿ ದೇವಸ್ಥಾನದ ಬಳಿಯ ಕುಕ್ಕೆಶ್ರೀ ಬಾಯ್ಸ್ ಪಿಜಿ ವಿರುದ್ಧ ಯುವಕ ಕದ್ರಿ ಠಾಣೆಗೆ ದೂರು ನೀಡಿದ್ದಾನೆ.




ವಿಕಾಸ್ ಕಳೆದ ಆರು ತಿಂಗಳಿನಿಂದ ಅದೇ ಪಿಜಿಯಲ್ಲಿದ್ದು, ಊಟದಲ್ಲಿ ಹುಳ ಬಿದ್ದಿರುವುದು, ಕ್ಲೀನ ಇಲ್ಲದಿರುವುದು, ಅತಿ ಕೆಟ್ಟ ಶೌಚಾಲಯ ಇದ್ದುದರಿಂದ ಬೇಸತ್ತು ಬೇರೆ ಪಿಜಿಗೆ ಹೋಗಿದ್ದ. ಈ ಬಗ್ಗೆ ಗೂಗಲ್ ನಲ್ಲಿ ಕುಕ್ಕೆಶ್ರೀ ಪಿಜಿ ಬಗ್ಗೆ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟು ಏನೂ ಚೆನ್ನಾಗಿಲ್ಲ ಎಂದು ಕಮೆಂಟ್ ಹಾಕಿದ್ದ. ಇದನ್ನು ಗಮನಿಸಿದ ಪಿಜಿ ಮಾಲೀಕ ಸಂತೋಷ್ ಎಂಬಾತ, ಕಮೆಂಟ್ ಡಿಲೀಟ್ ಮಾಡುವಂತೆ ಬೆದರಿಕೆ ಹಾಕಿದ್ದ. ಅಳಿಸಿ ಹಾಕದೇ ಇದ್ದುದಕ್ಕೆ ಸಂತೋಷ್ ಮತ್ತು ಆತನ ಪಟಾಲಂ ಸೇರಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದರೂ ಕೈಯಿಂದ ಹಲ್ಲೆ ಮಾಡಿದ್ದು ತೊಂದರೆ ಇಲ್ಲ ಎಂದು ಹೇಳಿ ಎಫ್ಐಆರ್ ಮಾಡಿಲ್ವಂತೆ. ಪೊಲೀಸರು ದೂರು ಪಡೆದು ಹಿಂದಕ್ಕೆ ಕಳಿಸಿದ್ದಾರೆ.

ವಿದ್ಯಾರ್ಥಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾವು ಪೊಲೀಸ್ ದೂರು ಕೊಟ್ಟಿದ್ದೇವೆ, ಆದರೆ ಕೈಯಲ್ಲಿ ಹಲ್ಲೆ ಮಾಡಿದ್ದಕ್ಕೆ ಕಂಪ್ಲೇಂಟ್ ರಿಜಿಸ್ಟರ್ ಮಾಡೋದಿಲ್ಲ ಎಂದಿದ್ದಾರೆ. ನಮಗೇನೂ ಗೊತ್ತಿರಲಿಲ್ಲ. ವಿದ್ಯಾರ್ಥಿ ಸಂಘಟನೆಯವರದ್ದೂ ಪರಿಚಯ ಇಲ್ಲ. ಅಲ್ಲಿ ಪಿಜಿ ಏನೂ ಚೆನ್ನಾಗಿಲ್ಲ. ನಾನೂ ಅಲ್ಲಿದ್ದೆ. ಹಾಗಾಗಿ ಕಮೆಂಟ್ ಹಾಕಿದ್ದೆ. ಅದಕ್ಕೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾನೆ. ಅಲ್ಲಿನ ಪಿಜಿಯ ವ್ಯವಸ್ಥೆ ಎಷ್ಟು ಕ್ಲೀನ್ ಇದೆಯೆಂದು ವಿದ್ಯಾರ್ಥಿ ತನ್ನಲ್ಲಿದ್ದ ಫೋಟೋಗಳನ್ನು ಮಾಧ್ಯಮಕ್ಕೆ ನೀಡಿದ್ದು ವಾಸ್ತವ ಸ್ಥಿತಿ ತೋರಿಸುತ್ತಿದೆ.
Engineering Student Attacked After Posting Negative Google Review About PG at kadri, Complaint Filed Against Owner in Mangalore.An engineering student, Vikas (18), hailing from Kalaburagi district, has been assaulted following his negative review about a paying guest (PG) accommodation in Mangalore. The incident took place on the night of March 17, around 10:30 PM, near the Kadri Temple, where Vikas lodged a complaint at the Kadri police station against the operator of the PG named Kukeshree Boys PG.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm