ಬ್ರೇಕಿಂಗ್ ನ್ಯೂಸ್
20-03-25 05:29 pm HK News Staff ಕ್ರೈಂ
ಬೆಂಗಳೂರು, ಮಾ.20: ಮಂಗಳೂರು ಪೊಲೀಸರು ವಿಮಾನದಲ್ಲಿ ತರುತ್ತಿದ್ದ ಭಾರೀ ಡ್ರಗ್ಸ್ ದಂಧೆಯನ್ನು ಬಯಲಿಗೆಳೆದ ಬೆನ್ನಲ್ಲೇ ಬೆಂಗಳೂರು ಏರ್ಪೋರ್ಟ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿದೇಶದಿಂದ ಅಕ್ರಮವಾಗಿ ಡ್ರಗ್ಸ್ ತರುತ್ತಿದ್ದ ಮಹಿಳೆಯನ್ನು ಕಂದಾಯ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 18ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕತಾರ್ ದೇಶದಿಂದ ಬಂದಿದ್ದ ಮಹಿಳೆಯನ್ನು ತಪಾಸಣೆ ನಡೆಸಿದಾಗ, ಆಕೆ ಅಕ್ರಮವಾಗಿ ಮಾದಕ ದ್ರವ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆ ಆಫ್ರಿಕಾದ ಘಾನಾ ದೇಶದ ಪ್ರಜೆಯಾಗಿದ್ದಾಳೆ.

ಖಚಿತ ಮಾಹಿತಿ ಆಧರಿಸಿ ಮಹಿಳೆಯ ಲಗೇಜ್ ಪರಿಶೀಲನೆ ನಡೆಸಿದ್ದು 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ಪತ್ತೆಯಾಗಿದೆ. ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ. ಮಹಿಳೆಗೆ ಕಳ್ಳ ಸಾಗಣಿಕೆದಾರರ ಜೊತೆಗೆ ನಂಟು ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು ಪೊಲೀಸರು ಇತ್ತೀಚೆಗೆ ರಾಜ್ಯದಲ್ಲೇ ಅತಿ ದೊಡ್ಡದು ಎನ್ನಲಾದ 75 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ವಶಪಡಿಸಿದ್ದರು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ತಂದು ಪೂರೈಕೆ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ಮೂಲದ ಪ್ರಜೆಗಳಿಬ್ಬರನ್ನು ಬಂಧಿಸಿ, 75 ಕೋಟಿ ಮೊತ್ತದ 37.870 ಕೆಜಿ ಎಡಿಎಂಎ ವಶಪಡಿಸಿಕೊಂಡಿದ್ದರು.
Directorate of Revenue Intelligence (DRI) officials seized 3.186 kg of cocaine worth Rs 38.4 crore from a woman from Ghana at Kempegowda International Airport. The accused, identified as Jennifer Abbe, arrived in Bengaluru from Doha, Qatar earlier on Wednesday. Based on a tip-off, DRI officials conducted a thorough inspection and discovered the contraband in her possession.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm