ಬ್ರೇಕಿಂಗ್ ನ್ಯೂಸ್
23-03-25 03:56 pm HK News Desk ಕ್ರೈಂ
ಬೆಳಗಾವಿ, ಮಾ.23 : ಗೋಕಾಕ್ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮಠಾಧೀಶರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಮಹಾಲಕ್ಷ್ಮಿ ಸೊಸೈಟಿಯ ವಂಚನೆ ಪ್ರಕರಣ ಬಯಲಾಗಿತ್ತು. ಇದರಿಂದ ನೂರಾರು ಗ್ರಾಹಕರು ಸೊಸೈಟಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಿಂದಲೇ ಸದಾಶಿವ ಹಿರೇಮಠ ಸ್ವಾಮೀಜಿ ಹಾಗೂ ಅವರ ಕುಟುಂಬಸ್ಥರ ಖಾತೆಗಳಿಗೆ 60 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಮಾಡಲಾಗಿದೆ. ಸ್ವಾಮೀಜಿ, ಸ್ವಾಮೀಜಿ ಪತ್ನಿ ಹಾಗೂ ಪುತ್ರನ ಖಾತೆಗೆ ಹಣ ವರ್ಗಾವಣೆ ಆಗಿರೋದು ತನಿಖೆಯಿಂದ ಬಯಲಾಗಿದೆ. ಇದೇ ಹಣದಲ್ಲಿ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶ್ರೀಗಳನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದಾರೆ.
ನಿವೇಶನ ಅಷ್ಟೇ ಅಲ್ಲದೇ ಹೊಸ ಬಬಲಾದಿ ಮಠದ ಜಾತ್ರೆ ಹಾಗೂ ಅನ್ನ ಸಂತರ್ಪಣೆಗೂ ಲಕ್ಷಾಂತರ ಹಣವನ್ನು ಆರೋಪಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ, ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಟೆಂಡರ್ ಆಗಿದ್ದ ಸಾಗರ ಸಬಕಾಳೆ ಹಾಗೂ ಇತರೇ ಸಿಬ್ಬಂದಿ ಬ್ಯಾಂಕ್ ನಲ್ಲಿ ಇದ್ದ ನೂರಾರು ಕೊಟಿ ಹಣವನ್ನು ವಂಚನೆ ಮಾಡಿದ್ದರು. ಬ್ಯಾಂಕಿನಲ್ಲಿ ಅಕ್ರಮವಾಗಿ 76 ಕೋಟಿ ಸಾಲ ಪಡೆದು ಮರಳಿಸದೇ ವಂಚನೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರ್ಬಿಐ ಅಧಿಕಾರಿಗಳೇ ದಂಗಾಗುವಂತೆ ವಂಚನೆ ಎಸಗಲಾಗಿತ್ತು. ಅಡಿಟ್ ವೇಳೆ ಸಾಲಗಾರರು ಹಾಗೂ ಠೇವಣಿ ಇಟ್ಟವರ ಮಾಹಿತಿ ತಿದ್ದುಪಡಿ ಮಾಡಿರುವುದು ಪತ್ತೆಯಾಗಿತ್ತು.
ಮೂರು ವರ್ಷಗಳಲ್ಲಿ ಅಡಿಟ್ ವೇಳೆಯೂ ವಂಚನೆ ಪ್ರಕರಣ ಬೆಳಕಿಗೆ ಬರದಂತೆ ಆರೋಪಿಗಳು ನೋಡಿಕೊಂಡಿದ್ದರು. ಈ ಹಣದಿಂದಲೇ ಗೋಕಾಕ್, ಬೆಳಗಾವಿ, ಹುಬ್ಬಳ್ಳಿಯಲ್ಲಿ ಜಮೀನು ಖರೀದಿಸಲಾಗಿತ್ತು. ಬ್ಯಾಂಕ್ ನಿರ್ದೇಶಕ ನೀಡಿದ ದೂರಿನನ್ವಯ ಪ್ರಕರಣ ಭೇದಿಸಿದ್ದ ಬೆಳಗಾವಿ ಪೊಲೀಸರು ಬಳಿಕ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದ್ದರು. ಇದೀಗ ಸಿಐಡಿ ಪೊಲೀಸರು ಕಾಲಜ್ಞಾನಿ ಭವಿಷ್ಯ ನುಡಿಯುವ ಸದಾಶಿವ ಹಿರೇಮಠ ಶ್ರೀಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Gokak Society Multi-Crore Fraud Case, Sadashiv Hiremath Swamiji Caught in CID Net
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm