ಬ್ರೇಕಿಂಗ್ ನ್ಯೂಸ್
26-03-25 08:00 pm Bangalore Correspondent ಕ್ರೈಂ
ಬೆಂಗಳೂರು, ಮಾ.26 : ಸೈಬರ್ ಕ್ರೈಂ ಪ್ರಕರಣದಲ್ಲಿ ತನಿಖೆ ನಡೆಸುವುದಕ್ಕಾಗಿ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಎಸಿಪಿ ಹಾಗೂ ಎಎಸ್ಐ ದರ್ಜೆಯ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಎರಡು ಲಕ್ಷ ರು. ಸ್ವೀಕರಿಸುತ್ತಿದ್ದಾಗಲೇ ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆಯ ಎಸಿಪಿ ತನ್ವೀರ್ ಎಸ್.ಆರ್. ಹಾಗೂ ಎಎಸ್ಐ ಕೃಷ್ಣಮೂರ್ತಿ ಅವರನ್ನ ಬಂಧಿಸಲಾಗಿದೆ.
ಅದ್ವಿ ಗ್ರೂಪ್ ಆಫ್ ಕಂಪನೀಸ್ ಎಂಬ ಉದ್ಯಮ ಸಮೂಹದ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಿದ್ದ ದುಷ್ಕರ್ಮಿಗಳು, ಅದರಲ್ಲಿ ತಪ್ಪು ಮಾಹಿತಿ ಪ್ರಕಟಿಸಿದ್ದರು. ಇದರಿಂದ ಕಂಪನಿಯ ಗೌರವಕ್ಕೆ ಧಕ್ಕೆ ಉಂಟಾಗಿತ್ತು. ಕಂಪನಿಯ ಮಾಲೀಕ ಮಧುಸೂದನ್ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಗಳನ್ನು ಬಂಧಿಸಿರಲಿಲ್ಲ. ಅನುಮಾನಿತ ಆರೋಪಿಯನ್ನ ವಿಚಾರಣೆ ನಡೆಸಿ ಪ್ರಕರಣದ ತನಿಖೆ ಕೈಗೊಳ್ಳಲು ಎಸಿಪಿ ತನ್ವೀರ್ ಮತ್ತು ಎಎಸೈ ಕೃಷ್ಣಮೂರ್ತಿ 4 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಮಧುಸೂದನ್ ದೂರು ನೀಡಿದ್ದರು.
ಮಂಗಳವಾರ ರಾತ್ರಿ ಆರ್.ಟಿ. ನಗರಕ್ಕೆ ಬಂದು ಹಣ ತಲುಪಿಸುವಂತೆ ಎಎಸ್ಐ ಕೃಷ್ಣಮೂರ್ತಿ ಸೂಚಿಸಿದ್ದರು. ಅದರಂತೆ ಅಲ್ಲಿಗೆ ತಲುಪಿದ ದೂರುದಾರರು ಹಣ ಕೊಟ್ಟ ಕೂಡಲೇ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಬಳಿಕ ಎಸಿಪಿ ತನ್ವೀರ್ ಅವರನ್ನೂ ತಡರಾತ್ರಿ ವೇಳೆಗೆ ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ-2 ರ ಎಸ್ಪಿ ಕೆ. ವಂಶಿಕೃಷ್ಣ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಎಚ್.ಜೆ. ತಿಪ್ಪೇಸ್ವಾಮಿ, ಇನ್ ಸ್ಪೆಕ್ಟರ್ ಗಳಾದ ವಿಜಯ್ ಕೃಷ್ಣ, ಪ್ರಶಾಂತ್, ಅಂಜನ್ ಕುಮಾರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
Two Senior Police Officers including ACP Tanveer S R Arrested in Bengalore for Bribery in Cyber Fraud Case by the Lokayukta police on Tuesday night, following a sting operation prompted by a complaint from a 42-year-old software engineer.
The Lokayukta, Karnataka’s anti-corruption watchdog, revealed that the officers had demanded Rs four lakh (approximately $4,800) from the complainant to investigate a cyber fraud case and arrest the accused.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm