ಬ್ರೇಕಿಂಗ್ ನ್ಯೂಸ್
27-03-25 01:37 pm HK News Desk ಕ್ರೈಂ
ಕೋಲ್ಕತ್ತ , ಮಾ 27: ಆದಾಯ ತೆರಿಗೆ (ಐಟಿ) ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ಐವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಮಾರ್ಚ್ 18ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಂತೆ ನಟಿಸಿ ತಂಡವೊಂದು ಚಿನಾರ್ ಪಾರ್ಕ್ ಪ್ರದೇಶದಲ್ಲಿ ಮಗಳೊಂದಿಗೆ ವಾಸಿಸುತ್ತಿರುವ ವಿನಿತಾ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ದಾಳಿ ಕುರಿತು ಅನುಮಾನ ಮೂಡಿದ್ದು, ವಿನಿತಾ ಅವರು ಬಾಗುಹಾಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದರೋಡೆಕೋರರು 3 ಲಕ್ಷ ನಗದು, 25 ಲಕ್ಷ ಮೌಲ್ಯದ ಆಭರಣಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಲಿಂಕ್ ಮಾಡಲಾದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ತನಿಖೆ ಆರಂಭದಲ್ಲಿ ಕೋಲ್ಕತ್ತದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಯಿತು. ಬಳಿಕ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಸಿಐಎಸ್‌ಎಫ್ ಸಿಬ್ಬಂದಿಯನ್ನು ಪತ್ತೆಹಚ್ಚಲಾಯಿತು.
ಅಪರಾಧದಲ್ಲಿ ಭಾಗಿಯಾಗಿರುವ ಇತರ ಶಂಕಿತರಿಗಾಗಿ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ. ವಿನಿತಾ ಅವರ ತಂದೆಯ ಮರಣದ ನಂತರ ವಿನಿತಾ ಸಿಂಗ್ ಮತ್ತು ಆಕೆಯ ಮಲತಾಯಿ ಆರತಿ ಸಿಂಗ್ ನಡುವೆ ಆಸ್ತಿ ವಿವಾದವಿತ್ತು ಎಂದು ತಿಳಿದುಬಂದಿದೆ. ಬಂಧಿತ ಸಿಐಎಸ್‌ಎಫ್ ಇನ್‌ಸ್ಪೆಕ್ಟರ್ ಜೊತೆ ಆರತಿ ಸಂಪರ್ಕ ಹೊಂದಿದ್ದು, ದರೋಡೆ ನಡೆಸಲು ಅವರನ್ನು ಸಂಪರ್ಕಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆರತಿ ಸಿಂಗ್ ಅವರನ್ನ ಕೂಡ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Five Central Industrial Security Force (CISF) personnel, including a lady constable, and three others were arrested on Wednesday for allegedly looting a house in the guise of an Income Tax raid near Kolkata on March 18, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm