Ccb Mangalore, Drugs, Charas, Crime: ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ 

28-03-25 08:37 pm       Mangalore Correspondent   ಕ್ರೈಂ

ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ. 

ಮಂಗಳೂರು, ಮಾ.28 : ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ. 

ಬೆಂಗಳೂರಿನಿಂದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5ನೇ ಕ್ರಾಸ್ ರಸ್ತೆಯಲ್ಲಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ. 

ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬಂಟ್ವಾಳ ಬೋಳಂಗಡಿ ನಿವಾಸಿ     ರೋಯಸ್ಟನ್ ಕ್ಸೇವಿಯರ್ ಲೋಬೋ(22) ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಶದಿಂದ 8,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ,ಚರಸ್ ಮತ್ತು ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 9  ಲಕ್ಷ ಆಗಬಹುದು. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.  ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು. 

ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ, ಪಿಎಸ್ಐ ನರೇಂದ್ರ, ಎಎಸ್ಐಗಳಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ  ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಪಾಲ್ಗೊಂಡಿದ್ದರು.

CCB Police Operation in Mangalore, Two Youths Arrested for Selling Hydroweed and Charas. The arrested are identified as Royston Xavier Lobo and Thaizeer Ismail Hussain.