ಬ್ರೇಕಿಂಗ್ ನ್ಯೂಸ್
30-03-25 08:59 am Mangaluru Correspondent ಕ್ರೈಂ
ಉಳ್ಳಾಲ, ಮಾ.30: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಘಟನೆ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಹೆಚ್.ಎಂ. ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಖದೀಮರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಕಳ್ಳತನ ನಡೆಸಲು ಮಳಿಗೆಯ ಬೀಗ ಒಡೆಯುತ್ತಿರುವಾಗಲೇ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದು ಇಬ್ಬರು ಆರೋಪಿಗಳಾದ ಕೇರಳದ ಕಾಂಞಂಗಾಡ್ ಮೂಲದ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಎಂಬವರು ಕಟ್ಟಡದಲ್ಲಿ ಲಾಕ್ ಆಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ.
ಮುರಳಿ ಮತ್ತು ಅಬ್ದುಲ್ ಲತೀಫ್ ಎಂಬ ಆರೋಪಿಗಳು ಕೇರಳದಲ್ಲಿ ಈ ಹಿಂದೆ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು ಎನ್ನುವ ಮಾಹಿತಿಯಿದೆ. ಕಳೆದ ಜನವರಿ ತಿಂಗಳಲ್ಲಿ ಕೆ.ಸಿ ರೋಡಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ನಲ್ಲಿ ಉತ್ಕೃಷ್ಟ ಮಟ್ಟದ ರಕ್ಷಣಾ ಸಲಕರಣೆ ಅಳವಡಿಸಿದ ಪರಿಣಾಮ ಸಂಭವನೀಯ ದರೋಡೆ ಪ್ರಕರಣವನ್ನ ವಿಫಲವಾಗಿದೆ.
ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಇನ್ಸ್ ಪೆಕ್ಟರ್ ರಾಜೇಂದ್ರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Two Arrested Red Handed in Mangalore Attempted Bank Robbery at Muthoot Finance in Derlakatte. In a brazen attempt to rob the Muthoot Finance branch in Derlakatte, police arrested two suspects red-handed while a third managed to escape during the thwarted heist. The incident unfolded when the suspects attempted to break the lock of the bank, triggering the alarm system, which alerted local authorities.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm