ಬ್ರೇಕಿಂಗ್ ನ್ಯೂಸ್
31-03-25 09:29 pm Mangalore Correspondent ಕ್ರೈಂ
ಮಂಗಳೂರು, ಮಾ.31 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಕಮಿಷನರ್ ಅವರನ್ನೇ ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಕಮಿಷನರ್ ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಬಿತ್ (25) ಎಂಬ ಇಬ್ಬರ ವಿರುದ್ಧ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು. ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಕಮಿಷನರ್ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು.
ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು ಮುಡಾ ಕಮಿಷನರ್ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡಿದ್ದರು. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದು ಮಾಡುತ್ತಿದ್ದರು.
ಅಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸಿದ್ದಲ್ಲದೆ, ವಾಮಾಚಾರ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಮುಡಾ ಕಮಿಷನರ್ ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.
FIR has been registered against two brokers following allegations of blackmail and threats directed at Noor Zahara Khanam, the Muda Commissioner. The complaint was lodged after Khanam reportedly received life threats and was pressured into compliance through intimidation tactics.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm