ಬ್ರೇಕಿಂಗ್ ನ್ಯೂಸ್
02-04-25 01:11 pm HK News Desk ಕ್ರೈಂ
ಚಿಕ್ಕಮಗಳೂರು, ಎ.2 : ವ್ಯಕ್ತಿಯೊಬ್ಬ ಪತ್ನಿ ತನ್ನನ್ನು ಬಿಟ್ಟುಹೋದ ಸಿಟ್ಟಿನಲ್ಲಿ ಆರು ವರ್ಷದ ಮಗಳು, ಅತ್ತೆ, ನಾದಿನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯ ಹೋಬಳಿ ಗ್ರಾಮದಲ್ಲಿ ನಡೆದಿದೆ.
ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ್ ತನ್ನ ಕುಟುಂಬದ ಮೂವರನ್ನು ಗುಂಡು ಹಾರಿಸಿ ಕೊಲೆಗೈದು ಸಾವಿಗೀಡಾಗಿದ್ದಾನೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತು ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟವರು. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡು ವರ್ಷದ ಹಿಂದೆ ರತ್ನಾಕರ್ ಪತ್ನಿ ಮಗಳು ಮತ್ತು ಪತಿಯನ್ನು ಬಿಟ್ಟು ಹೋಗಿದ್ದಳು. ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆಂದು ಅಪ್ಪ ರತ್ನಾಕರ್ ಬಳಿ ಮಗಳು ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ನಿನ್ನೆ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.
ರಾತ್ರಿ 10 ಗಂಟೆ ಸುಮಾರಿನಲ್ಲಿ ಕೃತ್ಯ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ. ನನಗೆ ಹಿಂಸೆಯಾಗುತ್ತಿದ್ದು ಬದುಕು ಸಾಕೆಂದು ನಿರ್ಧರಿಸಿದ್ದೇನೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ.
ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನು ಅದೇ ಬಂದೂಕಿನಿಂದ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikkamagaluru murder, father kills three of family including six year old daughter, kills himself. In a shocking incident that has sent ripples of horror through the community, a father allegedly shot and killed three members of his own family, including his six-year-old daughter, before turning the gun on himself.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm