Kalaburagi Murder, Three killed: ಕೌಟುಂಬಿಕ ಕಲಹಕ್ಕೆ ದುರಂತ ; ಕಲಬುರಗಿಯಲ್ಲಿ ಹಸುಗೂಸು ಸೇರಿ ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿ ಆತ್ಮಹತ್ಯೆ.! 

03-04-25 05:01 pm       HK News Desk   ಕ್ರೈಂ

ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.

ಕಲಬುರಗಿ, ಎ.3 : ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.

ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿ ಸಂತೋಷ್ ಕೊರಳಿ (45) ನೇಣು ಬಿಗಿದುಕೊಂಡಿದ್ದು ಇದಕ್ಕೂ ಮುನ್ನ ಪತ್ನಿ ಶೃತಿ (35), ಮಕ್ಕಳಾದ ಮುನೀಶ್ (9) ಹಾಗೂ ಮೂರು ತಿಂಗಳ ಮಗು ಅನೀಶ್‌ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಸಂತೋಷ್ ಅವರು ಕಲಬುರಗಿ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು.  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್‌ ನೋಟ್‌ ಬರೆದಿಟ್ಟಿದ್ದು ಸಿಕ್ಕಿದೆ ಎಂದು ಕಲಬುರಗಿ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ. ತಿಳಿಸಿದ್ದಾರೆ. 

'ಸಂತೋಷ್ ಹಾಗೂ ಶೃತಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ನಡುವೆ ಪದೇ ಪದೇ ಗಲಾಟೆ ಆಗುತ್ತಿತ್ತು. ಏಳು ವರ್ಷಗಳಿಂದ ಎರಡೂ ಕುಟುಂಬದ ಸಂಬಂಧಿಕರ ಜೊತೆಗೆ ಸಂಪರ್ಕ ಹೊಂದಿರಲಿಲ್ಲ. ಬುಧವಾರ ಸಂತೋಷ್ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಮತ್ತೆ ಗಲಾಟೆಯಾಗಿದೆ. ಕೌಟುಂಬಿಕ ಕಲಹಕ್ಕೆ ಈ ದುರುಂತ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a shocking incident that has left the local community in disbelief, a government employee of JESCOM reportedly killed his wife and two children before taking his own life in a tragic family dispute.