Bangalore Murder, Crime: ಅಕ್ರಮ ಸಂಬಂಧ ಶಂಕೆ ; ನಡು ರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ದು ಹತ್ಯೆ, ಬೆಚ್ಚಿಬಿದ್ದ ಬೆಂಗಳೂರಿನ ಜನತೆ 

05-04-25 08:53 pm       Bangalore Correspondent   ಕ್ರೈಂ

ಪತಿಯೊಬ್ಬ ನಡು ರಸ್ತೆಯಲ್ಲೇ ತನ್ನ ಪತ್ನಿಯ ಕತ್ತು ಕೊಯ್ದು, ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವಂತಹ ಘಟನೆ ನಗರದ ಎಲೆಕ್ರ್ಟಾನಿಕ್ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು, ಏ 05: ಪತಿಯೊಬ್ಬ ನಡು ರಸ್ತೆಯಲ್ಲೇ ತನ್ನ ಪತ್ನಿಯ ಕತ್ತು ಕೊಯ್ದು, ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವಂತಹ ಘಟನೆ ನಗರದ ಎಲೆಕ್ರ್ಟಾನಿಕ್ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗೇಪಲ್ಲಿ ಮೂಲದ ಶಾರದ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕೃಷ್ಣ ಪತ್ನಿಯನ್ನು ಕೊಂದ ಪತಿ. ಅಕ್ರಮ ಸಂಬಂಧದ ಹಿನ್ನೆಲೆ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನಗರದ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ಈ ಘಟನೆ ನಡೆದಿದೆ.

ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ ಪತಿ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಸಾರ ಫಾತಿಮಾ, ''ಸುಮಾರು 8:00 ಗಂಟೆ ಸಮಯದಲ್ಲಿ ನಮ್ಮ ಕಂಟ್ರೋಲ್ ರೂಮ್‌ಗೆ ಮಾಹಿತಿ ಬಂದಿತ್ತು. ನಮ್ಮ ಎಲೆಕ್ಟ್ರಾನಿಕ್ ಸಿಟಿ ಪಿಎಸ್ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದಾರೆ. ಕೂಡಲೇ ನಮ್ಮ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಯಾವ ವಿಚಾರಕ್ಕೆ ಕೊಲೆಯಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರ ಸಂಪೂರ್ಣ ವಿಚಾರ ಗೊತ್ತಾಗಬೇಕಾಗಿದೆ'' ಎಂದಿದ್ದಾರೆ.

Tragic Incident in Bangalore, Husband Allegedly Kills Wife Over Suspected Affair in Broad Daylight". The deceased has been identified as Sharadha.