ಬ್ರೇಕಿಂಗ್ ನ್ಯೂಸ್
08-04-25 09:26 pm HK News Desk ಕ್ರೈಂ
ರಾಯಚೂರು, ಎ.8 : ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಗೋಲ್ಡ್ ಲೋನ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಪ್ರಕರಣ ನಡೆದಿದ್ದು ರಾಯಚೂರು ಪೊಲೀಸರು ಬ್ಯಾಂಕ್ ಮ್ಯಾನೇಜರ್ ಮತ್ತು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ಬ್ಯಾಂಕ್ ಮ್ಯಾನೇಜರ್ ಕೆ. ನರೇಂದ್ರ ರೆಡ್ಡಿ ಹಾಗೂ ಕೆನರಾ ಬ್ಯಾಂಕ್ ನಿವೃತ್ತ ಸಿಬ್ಬಂದಿ ಅರುಣಾ ಬಂಧಿತ ಆರೋಪಿಗಳು. 2025 ಮಾರ್ಚ್ 7ರಂದು ಬ್ಯಾಂಕ್ ಆಫ್ ಮಹಾರಾಷ್ಟ್ರದ ರೀಜನಲ್ ಮ್ಯಾನೇಜರ್ ಸುಚೇತ್, 10.97 ಕೋಟಿ ರೂ. ಗೋಲ್ಡ್ ಲೋನ್ ಹಣ ಮಿಸ್ಸಿಂಗ್ ಆಗಿರುವ ಬಗ್ಗೆ ರಾಯಚೂರು ಸೈಬರ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಸಂದರ್ಭದಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರ ರಾಯಚೂರು ಶಾಖೆಯ ಮ್ಯಾನೇಜರ್ ಕೆ.ನರೇಂದ್ರ ರೆಡ್ಡಿ ಮತ್ತು ನಿವೃತ್ತ ಬ್ಯಾಂಕ್ ಸಿಬಂದಿ ಅರುಣಾ ಎನ್ನುವವರು ಪ್ರಮುಖ ಆರೋಪಿಗಳು ಅನ್ನೋದು ಗೊತ್ತಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಸಿಬಂದಿಯೇ ಗ್ರಾಹಕರಿಗೆ ತಿಳಿಯದಂತೆ 30 ಮಂದಿಯ ಹೆಸರಿನಲ್ಲಿ ಖಾತೆ ತೆರೆದಿದ್ದಲ್ಲದೆ, ಅವರ ಹೆಸರಿನಲ್ಲೇ ನಕಲಿ ಚಿನ್ನ ಇಟ್ಟು ಸಾಲ ತೆಗೆದಿದ್ದಾರೆ. ಅಲ್ಲದೆ, ಡಿಪಾಸಿಟ್ ಮಾಡಲಾಗಿದ್ದ ಒಟ್ಟು 10 ಕೋಟಿ 97 ಲಕ್ಷ ರೂಪಾಯಿ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದು ಬ್ಯಾಂಕಿನ ಆಂತರಿಕ ತನಿಖೆಯಲ್ಲಿ ಪತ್ತೆಯಾಗಿದೆ.
ಸದ್ಯ ಪ್ರಕರಣದಲ್ಲಿ ಇಬ್ಬರನ್ನು ಆರೆಸ್ಟ್ ಮಾಡಲಾಗಿದ್ದು, 79 ಲಕ್ಷದ 25 ಸಾವಿರ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಅರುಣಾದೇವಿ ಮತ್ತು ನರೇಂದ್ರ ರೆಡ್ಡಿ ಅವರು ಆಂಧ್ರಪ್ರದೇಶ್ ಕರ್ನೂಲ್ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಿತ್ತು. ಪರಿಚಯದ ಮೇಲೆ ಮ್ಯಾನೇಜರ್ ನರೇಂದ್ರ ರೆಡ್ಡಿ ಅವರು ತಾನು ಮೋಸದಲ್ಲಿ ಲಪಟಾಯಿಸಿದ ಹಣವನ್ನು ಅರುಣಾದೇವಿ ಖಾತೆಗೆ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಇದೀಗ ಇಬ್ಬರನ್ನು ಬಂಧಿಸಿ, ತನಿಖೆಯನ್ನು ಮುಂದುವರೆಸಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
Raichur Bank of Maharashtra Rs10.9 crore gold fraud, two including manager arrested. CEN Police in the district had received a complaint regarding a bank manager, accusing him of defrauding customers of Rs10.9 crore under the pretext of gold loans. Last week, a complaint was submitted to the CEN police station by Sujeet D'Souza, a zonal officer at Bank of Maharashtra in Vidyanagar, Hubballi
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm