ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm